ಕರ್ನಾಟಕ

karnataka

ETV Bharat / state

ಕನಕಪುರದಲ್ಲಿ ಮಂಡ್ಯ ಯುವಕ ಅನುಮಾನಾಸ್ಪದ ಸಾವು; ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ - ಇದ್ರೀಸ್ ಪಾಷಾ

ಕನಕಪುರ ಸಾತನೂರು ಸಮೀಪ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯ ಅನುಮಾನಾಸ್ಪದ ಸಾವಿನ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇದರ ಹೊಣೆಯನ್ನು ನೀವೇ ಹೊರಬೇಕೆಂದು ಟ್ವೀಟ್​ ಮಾಡಿದ್ದಾರೆ.

siddaramaiha
ಸಿದ್ದರಾಮಯ್ಯ ಟ್ವೀಟ್​

By

Published : Apr 2, 2023, 6:03 PM IST

ಬೆಂಗಳೂರು:ಸಾತನೂರು ಬಳಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವಿನ ಹೊಣೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಹೊತ್ತುಕೊಳ್ಳಬೇಕೆಂದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ 'ಮಾಡಿರುವ ಅವರು, ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ವ್ಯಕ್ತಿ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು' ಎಂದು ಒತ್ತಾಯಿಸಿದ್ದಾರೆ.

ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತು ಹಾಕಿ-ಸಿದ್ದರಾಮಯ್ಯ: 'ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತು ಹಾಕಿ' ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪೊಲೀಸರು ಪ್ರಕರಣದ ಕೂಲಂಕಷ ತನಿಖೆ ನಡೆಸಬೇಕು- ಸಿದ್ದರಾಮಯ್ಯ: 'ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕಷ ತನಿಖೆ ನಡೆಸಬೇಕು. ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು' ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಪ್ರಕರಣವೇನು?:ಕನಕಪುರ ಸಾತನೂರು ಸಮೀಪ ಗೋವುಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರು ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ವಾಹನ ತಡೆದಿದೆ.

ಈ ವೇಳೆ ಅದರಲ್ಲಿ ಇದ್ದ ಇದ್ರೀಸ್ ಪಾಷಾ ಮತ್ತೊಬ್ಬರು ತಪ್ಪಿಸಿಕೊಂಡಿದ್ದರು. ಅವರನ್ನು ಬೆನ್ನಟ್ಟಿದ ಪುನೀತ್ ಕೆರೆಹಳ್ಳಿ ತಂಡ ಥಳಿಸಿ ಹತ್ಯೆ ಮಾಡಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಸಂದರ್ಭ ವಾಹನದಿಂದ ಇಳಿದು ಇದ್ರೀಸ್ ಪಾಷಾ ಅವರು ಓಡಿಹೋಗಿದ್ದರು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇದ್ರೀಸ್ ಶವ ಪತ್ತೆಯಾಗಿದೆ. ಹೀಗಾಗಿ ಈ ಕುರಿತು ಮಾಜಿ ಮುಖ್ಯಮಂತ್ರಿ ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ಓದಿ:ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಎಂದು ದೂರು ದಾಖಲಿಸಿದ ಕುಟುಂಬಸ್ಥರು

ABOUT THE AUTHOR

...view details