ಬೆಂಗಳೂರು: ಮಾಜಿ ಸಚಿವ ಮುರುಗೇಶ್ ನಿರಾಣಿ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿರುವ ಕುರಿತು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹಿಂದೂ ದೇವರುಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾದ ವಿಚಾರ ಮಾಧ್ಯಮಗಳ ಮೂಲಕ ಗಮನಕ್ಕೆ ಬಂತು. ಇದು ನಿಜವಾಗಿದ್ದರೆ, ಬಹಳ ಕೆಟ್ಟ ನಡೆ-ನುಡಿ ಎಂದು ಹೇಳಬೇಕಾಗುತ್ತದೆ. ದೇವರು ಮತ್ತು ಧರ್ಮ ಅವರವರ ನಂಬಿಕೆ. ಅದನ್ನು ನಾವು ಗೌರವಿಸಬೇಕು ಅವಹೇಳನ ಮಾಡಬಾರದು ಎಂದು ಹೇಳಿದ್ದಾರೆ.
ದೇವರ ವಿಚಾರದಲ್ಲಿ ಅವಹೇಳನ ಮಾಡುವುದು ಸರಿಯಲ್ಲ: ಸಿದ್ದರಾಮಯ್ಯ - Siddaramaiah tweet on Murgesh Nirani
ಮುರುಗೇಶ್ ನಿರಾಣಿ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಪೋಸ್ಟ್ಗೆ ನಂತರ ಬಹಿರಂಗ ಕ್ಷಮೆ ಕೋರಿದ್ದಾರಾದರೂ, ಇವರು ಮಾಡಿಕೊಂಡ ಅಚಾತುರ್ಯ ಇದೀಗ ದೊಡ್ಡ ಮಟ್ಟದಲ್ಲಿ ಖಂಡನೆ ಹಾಗೂ ಟೀಕೆಗೆ ಪಾತ್ರವಾಗುತ್ತಿದೆ.
![ದೇವರ ವಿಚಾರದಲ್ಲಿ ಅವಹೇಳನ ಮಾಡುವುದು ಸರಿಯಲ್ಲ: ಸಿದ್ದರಾಮಯ್ಯ ಸಿದ್ದರಾಮಯ್ಯ](https://etvbharatimages.akamaized.net/etvbharat/prod-images/768-512-8118580-504-8118580-1595352502813.jpg)
ಸಿದ್ದರಾಮಯ್ಯ
ದೇವರು, ಧರ್ಮದ ಹೆಸರಲ್ಲಿ ಮುಗ್ಧರ ಶೋಷಣೆ, ಮೂಢನಂಬಿಕೆಯ ಆಚರಣೆ ಮಾಡುವುದು ತಪ್ಪು. ರಾಜಕೀಯ ಇಲ್ಲವೇ ಇನ್ನಾವುದೋ ಸ್ವಾರ್ಥ ಸಾಧನೆಗಾಗಿ ದೇವರು, ಧರ್ಮವನ್ನು ದುರ್ಬಳಕೆ ಮಾಡುವುದು ತಪ್ಪು. ಆದರೆ, ದೇವರನ್ನು ಗೇಲಿ-ಅವಹೇಳನ ಮಾಡುವುದು ವಿಕೃತಿ. ಇದನ್ನು ಯಾರು ಮಾಡಿದರೂ ಖಂಡನೀಯ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮುರುಗೇಶ್ ನಿರಾಣಿ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಪೋಸ್ಟ್ಗೆ ನಂತರ ಬಹಿರಂಗ ಕ್ಷಮೆ ಕೋರಿದ್ದಾರಾದರೂ, ಇವರು ಮಾಡಿಕೊಂಡ ಅಚಾತುರ್ಯ ಇದೀಗ ದೊಡ್ಡ ಮಟ್ಟದಲ್ಲಿ ಖಂಡನೆ ಹಾಗೂ ಟೀಕೆಗೆ ಪಾತ್ರವಾಗುತ್ತಿದೆ. ಸರ್ಕಾರ ಮಧ್ಯ ಪ್ರವೇಶಿಸಲಿ ಎಂದು ಆಗ್ರಹಿಸಿದ್ದಾರೆ.