ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು - ಸುವ್ಯವಸ್ಥೆಗೆ ಸಾಕ್ಷಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಕೆಲ ದಿನಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ದರೋಡೆ, ಲೂಟಿ, ದಾಳಿ, ಚೈನ್ ಸ್ನಾಚಿಂಗ್ ಪ್ರಕರಣ ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಮೈಸೂರಿನ ಜನರು ಭಯಭೀತರಾಗಿದ್ದಾರೆ. ತಮ್ಮ ಆಂತರಿಕ ರಾಜಕೀಯವನ್ನು ಬದಿಗೊತ್ತಿ, ಬಿಜೆಪಿ ಸರ್ಕಾರ ರಾಜ್ಯದ ಜನರ ಭದ್ರತೆಗೆ ಹೆಚ್ಚಿನ ಒತ್ತು ಕೊಡಬೇಕು. ಸಿಎಂ ಹಾಗೂ ಗೃಹ ಸಚಿವರು ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.