ಕರ್ನಾಟಕ

karnataka

ETV Bharat / state

ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಮೋದಿಗೆ ಪ್ರತಿಷ್ಠೆ ಅಡ್ಡಿ : ಸಿದ್ದರಾಮಯ್ಯ - delhi violence

ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಸ್‌ ಪಡೆಯಬೇಕಿತ್ತಲ್ಲವೇ..?

siddaramaia
ಸಿದ್ದರಾಮಯ್ಯ

By

Published : Jan 27, 2021, 4:30 PM IST

ಬೆಂಗಳೂರು :ನಿನ್ನೆ ದೆಹಲಿಯಲ್ಲಿ ನಡೆದ ಹಿಂಸಾಚಾರ ಹಾಗೂ ಕೆಂಪುಕೋಟೆಯಲ್ಲಿ ಖಾಲ್ಸ ಧ್ವಜ ಹಾರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್​​ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆ ಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ, ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು.

ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ ಎಂದು ಕೇಂದ್ರ ಸರ್ಕಾರಕ್ಕೆ ಟ್ಟಿಟರ್​ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ, ರೈತ ವಿರೋಧಿ‌ ಕಾನೂನುಗಳನ್ನು ವಾಪಸ್‌ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ಮೋದಿಯವರೆಗೆ, ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಸ್‌ ಪಡೆಯಬೇಕಿತ್ತಲ್ಲವೇ? ಎಂದು ಹರಿ ಹಾಯ್ದಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ಮೋದಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತಾ ಅದಾನಿ-ಅಂಬಾನಿಗೆ ಮಾತು ಕೊಟ್ಟಿದ್ದಾರೆ. ಹೀಗಾಗಿ, ರೈತರು ಎಷ್ಟೇ ಪ್ರತಿಭಟನೆ ನಡೆಸಿದ್ರೂ ಅವುಗಳನ್ನು ವಾಪಸ್ ಪಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details