ಕರ್ನಾಟಕ

karnataka

ETV Bharat / state

ಕೊರೊನಾ ರೋಗಕ್ಕೆ ಜಾತಿ-ಧರ್ಮಗಳಿಲ್ಲ.. ಧರ್ಮದ ಬಣ್ಣ ಹಚ್ಚುವುದು ಅಪಾಯಕಾರಿ- ಸಿದ್ದರಾಮಯ್ಯ ಟ್ವೀಟ್‌ - Siddaramaiah urges to open Kerala - Karnataka border

ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗೆಂದು ಆಗಮಿಸುವವರಿಗೆ ಗಡಿ ತೆರೆದು ಮಾನವೀಯ ನೆಲೆಯಲ್ಲಿ ಅನುವು ಮಾಡಿಕೊಡಬೇಕೆಂದು ಮಾಜಿ ಸಿಎಂ ಸಿದ್ದರಾಯ್ಯ ಒತ್ತಾಯಸಿದ್ದಾರೆ.

Siddaramaiah urges to open Kerala - Karnataka border
ಗಡಿ ಬಂದ್ ಬಗ್ಗೆ ಸಿದ್ದರಾಯ್ಯ ಟ್ವೀಟ್

By

Published : Apr 2, 2020, 10:38 AM IST

ಬೆಂಗಳೂರು :ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗೆ ಆಗಮಿಸಲು ಬಯಸುವವರಿಗೆ ಮಾನವೀಯತೆ ದೃಷ್ಟಿಯಿಂದ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ. ಸಾಮಾನ್ಯ ಸಂಚಾರವನ್ನು ಕಟ್ಟು ನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿ ಮುಕ್ತಗೊಳಿಸಬೇಕು. ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು ಎಂದಿದ್ದಾರೆ.

ಕಾಸರಗೋಡು-ದಕ್ಷಿಣಕನ್ನಡ ಜಿಲ್ಲೆಯ ಗಡಿ ತೆರೆಯುವ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಕೇರಳ ಗಡಿ ತೆರೆಯುವುದಿಲ್ಲ ಎಂದು ಸರ್ಕಾರ ಹೇಳಿದೆ. ಇದೀಗ ಈ ವಿವಾದ ಕೋರ್ಟ್ ಮೆಟ್ಟಿಲೇರಿದೆ. ದೆಹಲಿಯ ತಬ್ಲೀಗ್ ಜಮಾಅತ್​ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮ್ಯ, ಕೊರೊನಾ ಹರಡುವ ಕಾರ್ಯದಲ್ಲಿ ಅಲ್ಪಸಂಖ್ಯಾತ ಮುಸಲ್ಮಾನ ಸಮುದಾಯ ತೊಡಗಿಲ್ಲ. ಇವರಿಂದಲೇ ಕೊರೊನಾ ವ್ಯಾಪಿಸುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ABOUT THE AUTHOR

...view details