ಕರ್ನಾಟಕ

karnataka

ಬಜೆಟ್ ಅಧಿವೇಶನ: ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

By

Published : Mar 7, 2020, 1:14 PM IST

ಸದನದಲ್ಲಿ ನಡೆಯಲಿರುವ ಬಜೆಟ್​ ಮೇಲಿನ ಚರ್ಚೆಯಲ್ಲಿ ಎಲ್ಲಾ ಶಾಸಕರು ಸಕ್ರಿಯವಾಗಿ ಪಾಲ್ಗೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರದಂದು ಸಿಎಲ್​ಪಿ ಸಭೆ ಕರೆದಿದ್ದಾರೆ.

CLP meeting
ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಬಜೆಟ್ ಮೇಲೆ ನಡೆಯುವ ಚರ್ಚೆಯ ಕುರಿತು ಪರಾಮರ್ಶಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಸಿಎಲ್​ಪಿ ಸಭೆ ಕರೆದಿದ್ದಾರೆ.

6ನೇ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳಲ್ಲಿ ಚರ್ಚಿಸಬಹುದಾದ ವಿಷಯಗಳ ಕುರಿತು ಶಾಸಕರಿಗೆ ಮನವರಿಕೆ ಮಾಡಿಕೊಡಲು ಶಾಸಕಾಂಗ ಸಭೆ ಕರೆದಿದ್ದು, ಮಂಗಳವಾರ ಬೆಳಿಗ್ಗೆ 9.30 ಕ್ಕೆ ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಈ ಸಭೆ ನಿಗದಿಯಾಗಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಇತರೆ ನಾಯಕರು ಉಪಸ್ಥಿತರಿರಲಿದ್ದಾರೆ. ಎಲ್ಲಾ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆಯನ್ನು ನೀಡುವಂತೆ ಸಿದ್ದರಾಮಯ್ಯ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಅಧಿಸೂಚನೆ

ವಿಧಾನ ಮಂಡಲದ ಜಂಟಿ ಅಧಿವೇಶನ ಕಳೆದ ವಾರ ಆರಂಭವಾಗಿದ್ದು, ಈಗಾಗಲೇ ಒಂದು ಬಾರಿ ಶಾಸಕಾಂಗ ಸಭೆ ನಡೆಸಿರುವ ಸಿದ್ದರಾಮಯ್ಯ, ಆ ಸಂದರ್ಭ ಬಜೆಟ್‌ಪೂರ್ವ ಚರ್ಚೆ ಹಾಗೂ ರಾಜ್ಯಪಾಲರ ಭಾಷಣದ ಮೇಲಿನ ಮತ್ತು ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಳ್ಳುವ ಕುರಿತು ಶಾಸಕರಿಗೆ ಸೂಕ್ತ ನಿರ್ದೇಶನ ನೀಡಿದ್ದರು. ಅಲ್ಲದೆ ಕಳೆದವಾರ ನಡೆದ ಶಾಸಕಾಂಗ ಸಭೆಯಲ್ಲಿ ಬಿಜೆಪಿ ಸದಸ್ಯ ಬಸನ ಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಡೆಸುವ ಹೋರಾಟದ ಕುರಿತು ಚರ್ಚಿಸಿದ್ದರು.

ABOUT THE AUTHOR

...view details