ಕರ್ನಾಟಕ

karnataka

ETV Bharat / state

17 ಖಾರಿಫ್ ಬೆಳೆಗಳ ಘೋಷಿತ ಬೆಂಬಲ ಬೆಲೆ ಮರು ಪರಿಶೀಲಿಸಲು ಪ್ರಧಾನಿಗೆ ಸಿದ್ದರಾಮಯ್ಯ ಮನವಿ - ಮಾಜಿ ಸಿಎಂ ಸಿದ್ದರಾಮಯ್ಯ ನ್ಯೂಸ್

ಕೋವಿಡ್-19 ಏಕಾಏಕಿ ಕಾಡಿರುವ ಹಿನ್ನೆಲೆ ರೈತರಿಗೆ ಸಹಾಯ ಮಾಡಲು ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ವಿಸ್ತರಿಸಬೇಕು. ಅಲ್ಲದೆ ಅನೇಕ ರೈತರಿಗೆ ಎಂಎಸ್‌ಪಿಯಲ್ಲಿ ಮಾರಾಟ ಮಾಡಲು ಮಾರುಕಟ್ಟೆಗಳಿಗೆ ಪ್ರವೇಶವಿಲ್ಲ. ತಮ್ಮ ಉತ್ಪನ್ನಗಳನ್ನು ಸ್ಥಳೀಯ ವ್ಯಾಪಾರಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುವ ಸ್ಥಿತಿ ತಂದಿಟ್ಟಿದೆ.

Siddu
Siddu

By

Published : Jun 7, 2020, 4:32 PM IST

ಬೆಂಗಳೂರು: ಕೇಂದ್ರ ಸರ್ಕಾರ 2020-21ರ ಮಾರುಕಟ್ಟೆ ಸೀಸನ್‌ಗೆ 17 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಘೋಷಿಸಿದೆ. ಇದನ್ನು ಮರು ಪರಿಶೀಲನೆ ನಡೆಸಬೇಕೆಂದು ಪ್ರಧಾನಮಂತ್ರಿಗಳಿಗೆ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಪ್ರಧಾನಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಅನುಮೋದನೆ ನೀಡಿದೆ. ಈ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮತ್ತು ಸಿ2 ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ದರಗಳನ್ನು ಘೋಷಿಸುವಂತೆ ನಾನು ಕೇಂದ್ರ ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತೇನೆ ಎಂದಿದ್ದಾರೆ.

ಕೋವಿಡ್-19 ಕೃಷಿ ಸಮುದಾಯದ ದುರ್ಬಲತೆಯನ್ನು ಮತ್ತಷ್ಟು ಹೆಚ್ಚಿಸಿದೆ. ರೈತರು ಸುಗ್ಗಿಯ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ ಕೋವಿಡ್-19 ಏಕಾಏಕಿ ದಾಳಿ ಮಾಡಿದೆ. ಇದರ ಪರಿಣಾಮದಿಂದಾಗಿ ಬೇಡಿಕೆ ಮತ್ತು ಬೆಲೆಗಳು ಇದ್ದಕ್ಕಿದ್ದಂತೆ ಕುಸಿದಿದೆ. ಕೋವಿಡ್-19 ನಿಯಂತ್ರಿಸಲು ಹಾಗೂ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಂದ ಬಹಳ ಕಡಿಮೆ ಪ್ರಯತ್ನಗಳು ನಡೆದವು. 17 ಖಾರಿಫ್ ಬೆಳೆಗಳಿಗೆ ಎಂಎಸ್‌ಪಿ ದರವನ್ನು ಹೊಸದಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ತಮ್ಮ ನೇತೃತ್ವದ ಸರ್ಕಾರವಿದ್ದಾಗ 2022-23ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿತ್ತು. 2018-19ರ ಬಜೆಟ್‌ನಲ್ಲಿ ಎಂಎಸ್‌ಪಿ ದರ ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚಾಗುತ್ತದೆ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೂ 2018-19ರ ಬಜೆಟ್‌ನಲ್ಲಿ ಎಂಎಸ್‌ಪಿ ಘೋಷಿಸಿದಾಗ ಉತ್ಪಾದನಾ ಲೆಕ್ಕಾಚಾರದ ವೆಚ್ಚವು ಎಲ್ಲಾ ವೆಚ್ಚಗಳನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟ. ಎಂಎಸ್‌ಪಿ ಲೆಕ್ಕಾಚಾರ ಮಾಡುವಾಗ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗ (ಸಿಎಸಿಪಿ) ಹಲವಾರು ವೆಚ್ಚ, ಲೆಕ್ಕಾಚಾರದ ವಿಧಾನಗಳನ್ನು ಪರಿಗಣಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಕೋವಿಡ್-19 ಏಕಾಏಕಿ ಕಾಡಿರುವ ಹಿನ್ನೆಲೆ ರೈತರಿಗೆ ಸಹಾಯ ಮಾಡಲು ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ವಿಸ್ತರಿಸಬೇಕು. ಅಲ್ಲದೆ ಅನೇಕ ರೈತರಿಗೆ ಎಂಎಸ್‌ಪಿಯಲ್ಲಿ ಮಾರಾಟ ಮಾಡಲು ಮಾರುಕಟ್ಟೆಗಳಿಗೆ ಪ್ರವೇಶವಿಲ್ಲ. ತಮ್ಮ ಉತ್ಪನ್ನಗಳನ್ನು ಸ್ಥಳೀಯ ವ್ಯಾಪಾರಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುವ ಸ್ಥಿತಿ ತಂದಿಟ್ಟಿದೆ. ಅಂತಹ ಸಂದರ್ಭಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು ಮತ್ತು ಉತ್ಪನ್ನಗಳಿಗೆ ಸಾಕಷ್ಟು ಬೆಲೆ ನಿಗದಿಪಡಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details