ಬೆಂಗಳೂರು:ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
ಸಿದ್ದರಾಮಯ್ಯ ಅವರ ಜ್ವರ ತಗ್ಗಿದೆ, ಆರೋಗ್ಯವಾಗಿದ್ದಾರೆ: ಮಣಿಪಾಲ್ ಆಸ್ಪತ್ರೆ ಮಾಹಿತಿ - Siddaramaiah's fever is low
ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ವರದಿ ನೀಡಿರುವ ಮಣಿಪಾಲ್ ಆಸ್ಪತ್ರೆ ವೈದ್ಯರು ಸಿದ್ದರಾಮಯ್ಯ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಸೋಮವಾರ ಮಧ್ಯರಾತ್ರಿ ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ತಪಾಸಣೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆ ಇಲ್ಲಿನ ಕೋವಿಡ್ ವಾರ್ಡ್ನಲ್ಲಿ ಇರಿಸಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರ ಆರೋಗ್ಯ ವರದಿ ನೀಡಿರುವ ಮಣಿಪಾಲ್ ಆಸ್ಪತ್ರೆ ವೈದ್ಯರು ಸಿದ್ದರಾಮಯ್ಯ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಆಸ್ಪತ್ರೆಗೆ ದಾಖಲಾಗುವಾಗ ಅವರಿಗೆ ಜ್ವರ ಇತ್ತು. ಪ್ರಸ್ತುತ ಅವರಿಗೆ ಜ್ವರವಿಲ್ಲ ಮತ್ತು ಅವರ ಪ್ರಮುಖ ಪ್ಯಾರಾಮೀಟರ್ಸ್ಗಳು ಸ್ಥಿರವಾಗಿವೆ. ಅವರಿಗೆ ಸೂಕ್ತ ಚಿಕಿತ್ಸೆ ಆರಂಭಿಸಿದ್ದು, ಮುಂದುವರಿಸಲಾಗಿದೆ. ನಮ್ಮ ತಜ್ಞರು ಇವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದ ನಂತರ ಅವರ ಆರೋಗ್ಯ ಲಕ್ಷಣಗಳು ಸುಧಾರಿಸಿದೆ ಮತ್ತು ಪ್ರಸ್ತುತ ಅವರು ಆರಾಮವಾಗಿದ್ದಾರೆ ಎಂದು ತಿಳಿಸಿದೆ.