ಕರ್ನಾಟಕ

karnataka

By

Published : Dec 19, 2020, 9:41 PM IST

ETV Bharat / state

ಆಹಾರ ಸಂಸ್ಕೃತಿ ಬಗ್ಗೆ ನಾನಾಡಿದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ್ದಾರೆ. ಟ್ವೀಟ್ ಮೂಲಕ ತಮ್ಮ ಹೇಳಿಕೆಯ ಬಗ್ಗೆ ವಿವರಣೆ ನೀಡಿರುವ ಅವರು, ನನ್ನ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ ಎಂದಿದ್ದಾರೆ.

Siddaramaiah's given clarification about food culture
ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು:ಆಹಾರ ಸಂಸ್ಕೃತಿಯ ಬಗ್ಗೆ ನಾನು ಆಡಿದ ಮಾತನ್ನು ತಪ್ಪು ಗ್ರಹಿಕೆ ಮಾಡಿ ಅರ್ಥೈಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವೀಟ್ ಮೂಲಕ ತಮ್ಮ ಹೇಳಿಕೆಯ ಬಗ್ಗೆ ವಿವರಣೆ ನೀಡಿರುವ ಅವರು, ಆಡು, ಕುರಿ, ಕೋಳಿ, ಹಂದಿ, ದನ ಹೀಗೆ... ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ. ‌ಆಹಾರಕ್ಕೆ ಜಾತಿ - ಧರ್ಮಗಳನ್ನು ಗಂಟು ಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು‌ ಕೊಡವರು ಬೀಫ್​ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ. ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವ ಇದೆ ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಕೊಡವರೂ ಬೀಫ್​ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪು ಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ. ವಿಶೇಷವಾದ ಗೌರವವೂ ಇದೆ ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಇದನ್ನೂ ಓದಿ : ಕೊಡವ ಕುಟುಂಬದ ಹಾಕಿ ಜನಕ ಪಾಂಡಂಡ ಕುಟ್ಟಪ್ಪ ಇನ್ನಿಲ್ಲ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದಿದ್ದ ‘ಗ್ರಾಮ್‌ ಜನಾಧಿಕಾರ ಸಮಾವೇಶ’ದಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ವಿವಾದಕ್ಕೆ ಕಾರಣವಾಗಿತ್ತು. ಅವರ ಹೇಳಿಕೆ ಖಂಡಿಸಿ ಡಿ. 21ರಂದು ಬೆಳಗ್ಗೆ 10.30ಕ್ಕೆ ವಿವಿಧ ಕೊಡವ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲೂ ನಿರ್ಧರಿಸಲಾಗಿದೆ.

ABOUT THE AUTHOR

...view details