ಬೆಂಗಳೂರು :ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಸಂಬಂಧ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣ ಲೆಕ್ಕಿಸದೇ ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.
ಆದರೆ, ಅನಿವಾರ್ಯವಾಗಿ ಅವರು ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಇದರಲ್ಲಿ ಅನೇಕರು ಕೋವಿಡ್ ಸೋಂಕು ತಗುಲಿದವರಿದ್ದಾರೆ. ಅವರ ರಕ್ಷಣೆಗೆ ಸರ್ಕಾರ ಬರಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸರ್ಕಾರ ಇವರನ್ನು ಕೊರೊನಾ ವಾರಿಯರ್ಸ್ ಎಂದು ಕರೆಯಿತು. ಪ್ರಧಾನಿ ಮೋದಿ ಅವರಾದಿಯಾಗಿ ಚಪ್ಪಾಳೆ ತಟ್ಟಿ ಹೂಮಳೆಗರೆದು. ಇದಕ್ಕೆ ಜನರು ಸಹ ಸಹಮತ ವ್ಯಕ್ತಪಡಿಸಿದರು. ಆದರೆ, ಅವರಿಗೆ ನೀಡುತ್ತಿರುವ ಮಾಸಿಕ ವೇತನ ಕೇವಲ ₹4,000 ರಿಂದ ₹ 6,000 ಮಾತ್ರ. ಸರ್ಕಾರ ₹8,000 ರಿಂದ ₹9,000 ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ, ಈವರೆಗೂ ಕೂಡ 1 ರೂಪಾಯಿ ಕೂಡ ಹೆಚ್ಚಿಸಿಲ್ಲ.