ಕರ್ನಾಟಕ

karnataka

ETV Bharat / state

ಪಿಎಂ ಭೇಟಿ ವೇಳೆ ಕುರ್ಚಿ ಉಳಿಸಿಕೊಳ್ಳುವ ಬದಲು, ರಾಜ್ಯದ ಹಿತರಕ್ಷಣೆ ಗಮನದಲ್ಲಿರಲಿ: ಸಿಎಂಗೆ ಸಿದ್ದರಾಮಯ್ಯ ಸಲಹೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

siddaramaih-tweet-on-cm-bsy-delhi-tour
ಸಿಎಂಗೆ ಸಿದ್ದರಾಮಯ್ಯ ಸಲಹೆ

By

Published : Sep 18, 2020, 11:07 AM IST

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುವ ಬದಲು ರಾಜ್ಯದ ಹಿತ ರಕ್ಷಣೆಗೆ ಅಗತ್ಯ ಮಾತುಗಳನ್ನಾಡಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ನಾಯಕರ ಭೇಟಿ ಪ್ರಯುಕ್ತ ದೆಹಲಿಗೆ ತೆರಳಿರುವ ಸಿಎಂ ಯಡಿಯೂರಪ್ಪ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭ ವೈಯಕ್ತಿಕ ಅಭಿಲಾಷೆ ಮರೆತು ರಾಜ್ಯದ ಹಿತದೃಷ್ಟಿಯ ಕುರಿತು ಮಾತನಾಡಿ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಸಿಎಂಗೆ ಸಲಹೆ ನೀಡಿದ್ದಾರೆ.

ಟ್ವೀಟ್​​ನಲ್ಲಿ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ. 35,000 ಕೋಟಿ ಪರಿಹಾರ ಕೇಳಿದ್ದೀರಿ,‌ ಪ್ರಧಾನಮಂತ್ರಿ ನೀಡಿದ್ದು ರೂ.1,869 ಕೋಟಿ‌. ಈ ಬಾರಿ ರೂ. 8,000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ ಎಂದಿದ್ದಾರೆ.

ರಾಜ್ಯಕ್ಕೆ ನಷ್ಟ:

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್​ಡಿಆರ್​ಎಫ್​ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಸಿಎಂಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ಪ್ರಧಾನಿ ನರೇಂದ್ರ ಮೋದಿ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದು ಖಡಕ್ಕಾಗಿ ತಿಳಿಸಿದ್ದಾರೆ.

ರಾಜ್ಯದ ಬೇಡಿಕೆ ಪೂರೈಸಿಲ್ಲ:

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನ ಮಂತ್ರಿಗಳು ಕರ್ನಾಟಕದ ಬೇಡಿಕೆಯ ಶೇಕಡಾ 10ರಷ್ಟನ್ನು ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ನರೇಂದ್ರ ಮೋದಿಯವರ ಕಣ್ಣು ತೆರೆಸಿ. ಪ್ರಧಾನಿ ಘೋಷಿಸಿದ್ದ ರೂ. 20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್​ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದು ಸಲಹೆ ನೀಡಿದ್ದಾರೆ.

ಅನ್ಯಾಯ ಸರಿಪಡಿಸಲು ಹೇಳಿ:

ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರ ಸಾಲ ಎತ್ತಲು ರಾಜ್ಯದ ಮುಖ್ಯಮಂತ್ರಿಗಳಿಗೆ ಕೈಗೆ ಭಿಕ್ಷಾಪಾತ್ರೆ ನೀಡಿದೆ. ಬಿ.ಎಸ್. ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದಿದ್ದಾರೆ.

ABOUT THE AUTHOR

...view details