ಕರ್ನಾಟಕ

karnataka

ETV Bharat / state

ಹೆಚ್​ಡಿಕೆ ಹಾಗೂ ಸುರ್ಜೇವಾಲಾ ಶೀಘ್ರ ಚೇತರಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾರೈಕೆ - corona to hd kumaraswamy

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಸೋಂಕಿಗೆ ಒಳಗಾಗಿದ್ದಾರೆ. ಅವರು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಉತ್ತಮ ಆರೋಗ್ಯದೊಂದಿಗೆ ಹಿಂದಿರುಗಲಿ ಎಂದು ಆಶಿಸುತ್ತೇನೆ..

siddaramaih
siddaramaih

By

Published : Apr 17, 2021, 3:15 PM IST

ಬೆಂಗಳೂರು :ಕೊರೊನಾ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಶೀಘ್ರ ಚೇತರಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾರೈಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೊರೊನಾ ಸೋಂಕಿಗೊಳಗಾದ ಸುದ್ದಿ ಕೇಳಿ ಬೇಸರವಾಯಿತು. ಆದಷ್ಟು ಬೇಗ ಅವರು ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಸೋಂಕಿಗೆ ಒಳಗಾಗಿದ್ದಾರೆ. ಅವರು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಉತ್ತಮ ಆರೋಗ್ಯದೊಂದಿಗೆ ಹಿಂದಿರುಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಕೊರೊನಾದಿಂದ ಚೇತರಿಸಿಕೊಳ್ಳಲಿ ಎಂದು ರಾಜ್ಯ ಕಾಂಗ್ರೆಸ್​ನ ಹಲವು ನಾಯಕರು ಹಾರೈಸಿದ್ದಾರೆ.

ABOUT THE AUTHOR

...view details