ಬೆಂಗಳೂರು:ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಿದ್ದರಾಮಯ್ಯ ಮತಯಾಚನೆ ಮಾಡ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಿರುವ ಘಟನೆ ನಡೆದಿದೆ.
ಗೂಂಡಾಗಿರಿಗೆ ನಾವು ಹೆದರಲ್ಲ: ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಹುಷಾರ್ ಎಂದ ಸಿದ್ದು! - ಟ್ವೀಟರ್ನಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟರ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
Siddaramaiha attack BJP Workers
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಅವರ ವಾಹನ ಮುಂದಕ್ಕೆ ಚಲಿಸದಂತೆ ಅಡ್ಡಿಪಡಿಸಲಾಗಿದ್ದು, ಇದೇ ವಿಚಾರಕ್ಕೆ ಸಿದ್ದರಾಮಯ್ಯ ಟ್ವೀಟರ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಗೂಂಡಾಗಿರಿಗೆ ನಾವು ಹೆದರುವವರಲ್ಲ.ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಹುಷಾರ್ ! ಎಂದು ಟ್ವೀಟ್ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಈಗಾಗಲೇ ದೂರು ದಾಖಲು ಮಾಡಿದೆ.