ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯಗೆ ಚಳಿಜ್ವರ:ಮಣಿಪಾಲ್ ಆಸ್ಪತ್ರೆಗೆ ದಾಖಲು - ಸಿದ್ದರಾಮಯ್ಯಗೆ ಅನಾರೋಗ್ಯ ಸುದ್ದಿ

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚಳಿಜ್ವರ ಕಾಣಿಸಿಕೊಂಡಿದ್ದು,ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತೀವ್ರ ಜ್ವರದ ಹಿನ್ನೆಲೆಯಲ್ಲಿ ಅವರು ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿದು ಚಿಕಿತ್ಸೆ ಪಡೆಯಲಿದ್ದಾರೆ. ಇನ್ನು ಅವರಿಗೆ ಕೊರೊನಾ ಟೆಸ್ಟ್​ ಸಹ ಮಾಡಲಾಗಿದ್ದು, ವರದಿ ನೆಗೆಟಿವ್​ ಬಂದಿದೆ.

siddaramaiah
siddaramaiah

By

Published : Jun 1, 2021, 5:43 PM IST

Updated : Jun 1, 2021, 5:57 PM IST

ಬೆಂಗಳೂರು:ಜ್ವರದಿಂದ ಬಳಲುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಷ್ಠಿತ ಮಣಿಪಾಲ್​ ಆಸ್ಪತ್ರೆಗೆ ಅಡ್ಮಿಟ್​ ಆಗಿದ್ದಾರೆ. ಎರಡು ದಿನಗಳ ಕಾಲ ಅಲ್ಲೇ ಉಳಿದು ಚಿಕಿತ್ಸೆ ಪಡೆಯಲಿದ್ದಾರೆ. ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ತಂದೆ ಜತೆ ಇರಲಿದ್ದು, ಯೋಗಕ್ಷೇಮ ನೋಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ತಡರಾತ್ರಿಯಿಂದ ಸಿದ್ದರಾಮಯ್ಯಗೆ ಚಳಿಜ್ವರ ಕಾಣಿಸಿಕೊಂಡಿದ್ದು, ಆರೋಗ್ಯ ತಪಾಸಣೆಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಜ್ವರ ಮಾತ್ರ ಇದ್ದು ಕೋವಿಡ್ ತಪಾಸಣೆ ಕೂಡ ನೆಗೆಟಿವ್ ಬಂದಿದೆ. ಆದಾಗ್ಯೂ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರನ್ನು ತಪಾಸಣೆ ನಡೆಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಅಬ್ಬರ ಕೊಂಚಮಟ್ಟಿಗೆ ಇಳಿಕೆ ಕಾಣುತ್ತಿದ್ದು, ಸಿದ್ದರಾಮಯ್ಯ ಕಳೆದ ಒಂದೆರಡು ವಾರಗಳಲ್ಲಿ ಸಾಕಷ್ಟು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ನಗರದಲ್ಲಿ ಕಳೆದ ಒಂದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ವಾರದಲ್ಲಿ ಒಂದೆರಡು ದಿನ ಮಳೆ ಕೂಡ ಆಗಿದೆ. ವಾತಾವರಣದಲ್ಲಿ ಉಂಟಾದ ಬದಲಾವಣೆಯಿಂದಲೂ ಸಿದ್ದರಾಮಯ್ಯ ಅನಾರೋಗ್ಯಕ್ಕೆ ಒಳಗಾಗಿರಬಹುದು ಎನ್ನಲಾಗುತ್ತಿದೆ.

ಕೂಲಂಕಷ ತಪಾಸಣೆಗೆ ಒಳಗಾದ ಸಿದ್ದರಾಮಯ್ಯ ಎರಡು ದಿನ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯಲಿದ್ದಾರೆ.

Last Updated : Jun 1, 2021, 5:57 PM IST

ABOUT THE AUTHOR

...view details