ಬೆಂಗಳೂರು: ಸಾವರ್ಕರ್ಗೆ ಭಾರತ ರತ್ನ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದೀಗ ಟ್ವಿಟರ್ ಮೂಲಕ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯಿಸಿದ್ದಾರೆ.
ಮೊದಲಿಗೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡಿ: ಸಿದ್ದರಾಮಯ್ಯ ಟ್ವೀಟ್ ಸಾರ್ವರ್ಕರ್ ಅವರಿಗೆ 'ಭಾರತ ರತ್ನ' ಆಮೇಲೆ ಕೊಡುವಿರಂತೆ. ಮೊದಲು ಸಾಮಾಜಿಕ ಸೇವೆಗಾಗಿ ತನ್ನ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತರತ್ನ ನೀಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಮುಂಚೆಯೂ ಸಿದ್ದರಾಮಯ್ಯ ಅವರು ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯಿಸಿದ್ದರು. ಇದೀಗ ಸಾವರ್ಕರ್ಗೆ ಭಾರತ ರತ್ನ ನೀಡುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡುವಂತೆ ಮತ್ತೊಮ್ಮೆ ಆಗ್ರಹಿಸಿದ್ದಾರೆ.
ಸಾವರ್ಕರ್ಗೆ ಭಾರತ ರತ್ನ ಆ ಮೇಲೆ ಕೊಡವಿರಂತೆ ಮೊದಲಿಗೆ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ ಎಂದು ಟ್ವಿಟರ್ನಲ್ಲಿ ಒತ್ತಾಯಿಸಿದ್ದಾರೆ.