ಕರ್ನಾಟಕ

karnataka

By

Published : Apr 23, 2021, 7:56 PM IST

Updated : Apr 23, 2021, 8:03 PM IST

ETV Bharat / state

ಪರದೆ ಮುಂದೆ ಪದೇ ಪದೆ ಮುಖ ತೋರಿಸಿದ್ರೆ ವೈರಸ್ ಓಡ್ಹೋಗುತ್ತಾ ಪ್ರಧಾನಿಗಳೇ?: ಸಿದ್ದರಾಮಯ್ಯ

ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ?. 'ಪರಿಸ್ಥಿತಿ ಕೈಮೀರಿಹೋಗಿದೆ' ಎಂದು ಸಿಎಂ ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ..

siddaramaih
ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ‌ ಅವರೇ, ಪರದೆಯಲ್ಲಿ ಮತ್ತೆ ಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿ ಹೋಗುವುದಿಲ್ಲ. ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ ಮಾಡಲು ನೀವು ಹೆಡ್‌ಮಾಸ್ಟರ್ ಕೂಡ ಅಲ್ಲ.

ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ, ಕೊರೊನಾ ವೈರಸ್ ನಿಯಂತ್ರಿಸಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಅಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ.

ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ?. ಬೆಂಗಳೂರಿನ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487.

ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15 ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ಸಿಎಂ ನಿಮಗೇನಾದರೂ ತಿಳಿಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ.65ರಷ್ಟು ಸಾಮಾನ್ಯ ಹಾಸಿಗೆ, ಶೇ.96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ.98ರಷ್ಟು ಐಸಿಯು ಹಾಸಿಗೆ ಮತ್ತು ಶೇ.97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ.

ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ?. 'ಪರಿಸ್ಥಿತಿ ಕೈಮೀರಿಹೋಗಿದೆ' ಎಂದು ಸಿಎಂ ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ.

ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಓದಿ:ಮದುವೆಗೂ ಮೊದ್ಲೇ ಪರಿವಾನಿಗೆ ಎಂಬ ಪ್ರಸವ ವೇದನೆ.. ಸಾಕ್‌ಸಾಕಾಗಿ ಹೋಯ್ತ್‌ರೀಪಾ..

Last Updated : Apr 23, 2021, 8:03 PM IST

ABOUT THE AUTHOR

...view details