ಕರ್ನಾಟಕ

karnataka

By

Published : Oct 9, 2019, 9:36 PM IST

ETV Bharat / state

ಗುಣಮಟ್ಟದ ಶಿಕ್ಷಣಕ್ಕಾಗಿ ವಿದೇಶಿ ವಿವಿ ಜೊತೆ ಒಪ್ಪಂದಕ್ಕೆ ಸಹಿ: ಡಿಸಿಎಂ ಅಶ್ವತ್ಥ್​ ನಾರಾಯಣ್

ವಿದೇಶಿ ವಿವಿಗಳಲ್ಲಿರುವ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳಲು, ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಉನ್ನತ ಶಿಕ್ಷಣ ಖಾತೆಯನ್ನೂ ನಿರ್ವಹಿಸುತ್ತಿರುವ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ.

ವಿದೇಶಿ ವಿವಿ ಜೊತೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ವಿದೇಶಿ ವಿವಿಗಳಲ್ಲಿರುವ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳಲು, ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಉನ್ನತ ಶಿಕ್ಷಣ ಖಾತೆಯನ್ನೂ ನಿರ್ವಹಿಸುತ್ತಿರುವ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ.

ಇಂದು ಖಾಸಗಿ ಹೋಟೆಲ್​ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಯುಕೆಯ ಸಲ್ಫೋರ್ಡ್ ಯೂನಿವರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತಾನಾಡಿದ ಡಿಸಿಎಂ, ಕೈಗಾರಿಕೋದ್ಯಮದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಅದೇ ರೀತಿ ಸಂಸ್ಥೆ-ವಿವಿಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಸಂಶೋಧನೆ ಮತ್ತಷ್ಟು ಹೆಚ್ಚಿಸುವ ಸಂಬಂಧ ಅಲ್ಲಿನ ವಿವಿ ಜೊತೆ ವಿನಿಮಯ ಮಾಡಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ. ಯಾವ ರೀತಿ ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಇದು ಉಪಯುಕ್ತವಾಗುತ್ತದೆ ಎಂದು ತಿಳಿಸಿದ್ರು.‌ ಸಾಕಷ್ಟು ವಿವಿಗಳಲ್ಲಿ ಸಂಶೋಧನೆಗಳು ಲ್ಯಾಬ್​ಗಳಿಗೆ ಸೀಮಿತವಾಗಿವೆ. ಅದು ಫೀಲ್ಡ್​ಗೆ ಬರುವಂತಾಗಬೇಕು.‌ ಸಮಾಜಕ್ಕೆ ಅನುಕೂಲವಾಗುವ ಸಂಶೋಧನೆಗಳು ನಡೆಯಬೇಕಿದೆ ಎಂದರು.‌

ವಿದೇಶಿ ವಿವಿ ಜೊತೆ ಒಪ್ಪಂದಕ್ಕೆ ಸಹಿ

ಬಯೋ ಸೈನ್ಸ್, ಹೆಲ್ತ್ ಸೈನ್ಸ್, ರೋಬೋಟಿಕ್ಸ್ ಸೇರಿದಂತೆ ಹಲವರು ವಿಷಯಗಳಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಅಭಿವೃದ್ಧಿಯಾಗಬೇಕಿದೆ. ಪಠ್ಯಕ್ರಮ ಅಭಿವೃದ್ಧಿಯಲ್ಲೂ ಸಾಕಷ್ಟು ಬದಲಾವಣೆಗಳಾಗಬೇಕಿದೆ. ಅದಕ್ಕಾಗಿ ಈ ರೀತಿಯ ವಿದೇಶಿ ವಿವಿಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕಿದೆ. ಈ ಮೂಲಕ ಅವರಲ್ಲಿರುವ ಮಾಹಿತಿಯನ್ನ ಪಡೆದುಕೊಳ್ಳಬೇಕಿದೆ.‌ ಇದರ ಜೊತೆಗೆ ನಮ್ಮಲ್ಲಿರುವ ಮಾಹಿತಿ ನೀಡಿ, ಅವರಲ್ಲಿರುವ ಗುಣಮಟ್ಟವನ್ನು ಪಡೆದುಕೊಳ್ಳುವುದಕ್ಕಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ‌‌ ಅಂತ ತಿಳಿಸಿದರು.

ABOUT THE AUTHOR

...view details