ಬೆಂಗಳೂರು: ಅಕ್ರಮ ಸಕ್ರಮ ಯೋಜನೆ ಜಾರಿ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಸಿಎಂ ಬಿಎಸ್ವೈ ನೇತೃತ್ವದಲ್ಲಿ ಮಹತ್ವದ ಸಭೆ: ಅಕ್ರಮ ಸಕ್ರಮ ಕುರಿತು ಚರ್ಚೆ - bangalore latest news
ಅಕ್ರಮ ಸಕ್ರಮ ಯೋಜನೆ ಜಾರಿ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ್ ಸೇರಿದಂತೆ ಇತರರು ಇದ್ದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಕಂದಾಯ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಕ್ರಮ ಸಕ್ರಮದ ಕುರಿತು ಚರ್ಚೆ ನಡೆಯುತ್ತಿದೆ. ಈ ಹಿಂದೆ ಅಕ್ರಮ ಸಕ್ರಮದ ಕುರಿತಂತೆ ಸಂಪುಟ ಉಪ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ವರದಿಯ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಬಿಬಿಎಂಪಿ, ಬಿಡಿಎ ಕಮಿಷನರ್ ಉಪಸ್ಥಿತರಿದ್ದಾರೆ.