ಬೆಂಗಳೂರು: ಟ್ರೋಲ್ ಮಾಡಲು ರೋಹಿಣಿ ಸಿಂಧೂರಿ ಬಾಡಿಗೆ ಟ್ರೋಲರ್ಸ್ ಬಳಕೆ ಮಾಡಿದ್ದಾರೆ ಎನ್ನುವ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗುತ್ತಿದೆ. ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ಬಾಡಿಗೆ ಟ್ರೋಲರ್ಗಳ ನೆರವು ಪಡೆದು ವಿರೋಧಿಗಳನ್ನು ಹತ್ತಿಕ್ಕುತ್ತಾರೆ ಎಂದು ಡಿ.ರೂಪಾ ಆರೋಪಿಸಿದ್ದರು.
‘ವಿರೋಧಿಗಳನ್ನು ಹತ್ತಿಕ್ಕಲು ಬಾಡಿಗೆ ಟ್ರೋಲರ್ಸ್’
ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ರೋಹಿಣಿ ಸಿಂಧೂರಿ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಲು ಬಾಡಿಗೆ ಟ್ರೋಲರ್ಗಳನ್ನು ಬಳಸುತ್ತಾರೆ ಎಂದು ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪಾ ಗಂಭೀರವಾಗಿ ದೂರಿದ್ದರು.
- https://m.facebook.com/story.php?story_fbid=3705391159566439&id=100002867757921
‘ರೋಹಿಣಿ ವಿರುದ್ಧ ಪೋಸ್ಟ್ ಹಾಕಬೇಡಿ’
ಈ ವಿಷಯ ಸದ್ಯಕ್ಕೆ ಎಲ್ಲೆಡೆ ಸಾಕಷ್ಟು ವೈರಲ್ ಆಗುತ್ತಿದೆ. ವ್ಯಕ್ತಿಯೊಬ್ಬರು ಜೂನ್ 25 ರಂದು ರೂಪಾರೊಂದಿಗೆ ವಾಟ್ಸ್ಆ್ಯಪ್ ಚಾಟ್ ಮೂಲಕ ನಡೆಸಿದ ಸಂಭಾಷಣೆಯನ್ನು ಜುಲೈ 3ರಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವ್ಯಕ್ತಿಯು ತಮ್ಮ ಸಂಬಂಧಿಯೊಬ್ಬರಿಗೆ ಕೋವಿಡ್ ಚಿಕಿತ್ಸೆಗಾಗಿ ರೂಪಾ ಬೆಡ್ ಕೊಡಿಸಿದ ವಿಷಯವನ್ನು ಪ್ರಸ್ತಾಪಿಸಿ ತಮ್ಮನ್ನು ಪರಿಚಯಿಸಿಕೊಂಡಿದ್ದಾರೆ.
ಜೊತೆಗೆ ತಾನು ಸಾರ್ವಜನಿಕ ಸಂಪರ್ಕ (ಪಿಆರ್) ಏಜೆನ್ಸಿಯೊಂದರ ಮಾಜಿ ಉದ್ಯೋಗಿ ಎಂದೂ ಹೇಳಿದ್ದಾನೆ. ಮಾತನಾಡುತ್ತಾ, ನೀವು ರೋಹಿಣಿ ಸಿಂಧೂರಿ ವಿರುದ್ಧ ಪೋಸ್ಟ್ಗಳನ್ನು ಹಾಕಬೇಡಿ ಎಂದು ರೂಪಾರಿಗೆ ಹೇಳಿದ್ದಾರೆ. ಯಾಕೆ ಎಂದು ರೂಪಾ ಪ್ರಶ್ನಿಸಿದಾಗ ರೋಹಿಣಿ ಅವರನ್ನು ಟೀಕಿಸುವವರ ವಿರುದ್ಧದ ಪ್ರತಿಕ್ರಿಯೆಗಳು ಬಾಡಿಗೆ ಟ್ರೋಲರ್ಗಳಿಂದ ಬರುತ್ತವೆ. ನಾನು ಕೂಡ ಆ ಸಂಸ್ಥೆಯಲ್ಲಿ ಕೆಲ ಕಾಲ ಕೆಲಸ ಮಾಡಿದ್ದೇನೆ. ಈಗಲೂ ಬಳಕೆಯಾಗುತ್ತಿರುವುದಾಗಿ ನನ್ನ ಸ್ನೇಹಿತರು ತಿಳಿಸಿದ್ದಾರೆ ಎಂದು ಆ ವ್ಯಕ್ತಿ ಹೇಳಿದ್ದಾರೆ ಎನ್ನಲಾಗಿದೆ.
‘ಸುಮ್ಮನಿದ್ದು ಬಿಡಿ ಮೇಡಂ’
ರೋಹಿಣಿ ಸಿಂಧೂರಿ ಮತ್ತು ಅವರ ಪತಿ ಬಾಡಿಗೆ ಟ್ರೋಲರ್ಗಳ ನೆರವು ಪಡೆದು ವಿರೋಧಿಗಳನ್ನು ಮಣಿಸುತ್ತಾರೆ ಎಂದು ಆ ವ್ಯಕ್ತಿ ಹೇಳಿರುವ ಮಾತನ್ನು ರೂಪಾ ಬಹಿರಂಗಪಡಿಸಿದ್ದಾರೆ. ನಾನು ಒಂದು ಪಿ.ಆರ್ ಏಜೆನ್ಸಿಯಲ್ಲಿ ಹಿಂದೆ ಉದ್ಯೋಗಿಯಾಗಿದ್ದೆ. ಸಿಂಧೂರಿ ಪತಿ ಒಂದು ವರ್ಷದಿಂದ ಏಜೆನ್ಸಿಯ ಸೇವೆ ಪಡೆಯುತ್ತಿದ್ದಾರೆ. ವಿರೋಧಿಗಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಲು ಬಳಸಿಕೊಳ್ಳುತ್ತಿದ್ದಾರೆ.