ಕರ್ನಾಟಕ

karnataka

By

Published : Aug 5, 2020, 5:42 AM IST

Updated : Aug 5, 2020, 6:28 AM IST

ETV Bharat / state

ಶಿರಾ ಶಾಸಕ ಸತ್ಯನಾರಾಯಣ ನಿಧನ; ಸಿಎಂ ಸೇರಿ ಬಿಜೆಪಿ ನಾಯಕರಿಂದ ಸಂತಾಪ ಸೂಚನೆ

ಮಾಜಿ ಸಚಿವ ಹಾಗೂ ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ 10.45ರ ಸುಮಾರಿಗೆ ವಿಧಿವಶರಾಗಿದ್ದಾರೆ. ಸತ್ಯನಾರಾಯಣ ಅವರ ನಿಧನಕ್ಕೆ ಬಿಜೆಪಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

b sathyanarayana
ಬಿ ಸತ್ಯನಾರಾಯಣ

ಬೆಂಗಳೂರು:ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಶಿರಾ ಶಾಸಕ ಸತ್ಯನಾರಾಯಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಚಿವ, ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದ ಅವರು, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಜನಾನುರಾಗಿ ಸತ್ಯನಾರಾಯಣ ಅವರ ನಿಧನದಿಂದ ಉತ್ತಮ ಶಾಸಕರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು, ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತನು ಕರುಣಿಸಲಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ಸಂದೇಶ

ಜೆಡಿಎಸ್ ಪಕ್ಷದ ಶಿರಾ ಕ್ಷೇತ್ರದ ಶಾಸಕ ಬಿ.ಸತ್ಯ ನಾರಾಯಣರವರು ಅನಾರೋಗ್ಯದಿಂದ ವಿಧಿವಶರಾಗಿದ್ದು ಅತ್ಯಂತ‌ ದುಃಖದ ಸಂಗತಿ. ಅವರು ಸರಳ‌ ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದರು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಪರಿವಾರಕ್ಕೆ ಹಾಗೂ ಅನುಯಾಯಿಗಳಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಗೋವಿಂದ ಕಾರಜೋಳ ಕೂಡ ಟ್ವೀಟ್ ಮಾಡಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಸಿಎಂ ಯಡಿಯೂರಪ್ಪ ಟ್ವೀಟ್​

ಮಾಜಿ ಸಚಿವರು, ಶಿರಾ ಕ್ಷೇತ್ರದ ಶಾಸಕರಾದ ಬಿ. ಸತ್ಯನಾರಾಯಣ ಅವರ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಸಂತಾಪ ಸಂದೇಶ ತಿಳಿಸಿದ್ದಾರೆ.

ಬಿ. ಸತ್ಯನಾರಾಯಣ ನಿಧನಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ‌. ತುಮಕೂರು ಜಿಲ್ಲೆಯ ಶಿರಾ ಶಾಸಕ ಹಾಗು ಮಾಜಿ ಸಚಿವ ಬಿ. ಸತ್ಯನಾರಾಯಣ ಅವರು ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದು, ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Last Updated : Aug 5, 2020, 6:28 AM IST

ABOUT THE AUTHOR

...view details