ಕರ್ನಾಟಕ

karnataka

ETV Bharat / state

ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ: ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ ತನಿಖಾ ದಳ - ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್​ಐಟಿ ತಂಡ ಕ್ಲೀನ್ ಚಿಟ್ ನೀಡಿ ಕೋರ್ಟ್​ಗೆ ಬಿ-ರಿಪೋರ್ಟ್ ಸಲ್ಲಿಸಿದೆ.

SIT giving clean chit to former minister Ramesh jarkiholi, SIT giving clean chit to former minister Ramesh jarkiholi in CD case, former minister Ramesh jarkiholi news, former minister Ramesh jarkiholi CD case news, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ, ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸುದ್ದಿ,
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್ಐಟಿ

By

Published : Feb 4, 2022, 1:14 PM IST

Updated : Feb 4, 2022, 1:59 PM IST

ಬೆಂಗಳೂರು:ದೇಶದಲ್ಲಿ ಸಂಚಲನ ಮೂಡಿಸಿದ್ದ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಆರೋಪಿಗೆ ಎಸ್​ಐಟಿ ತಂಡ ಕ್ಲೀನ್​ ಚೀಟ್​ ನೀಡಿದೆ. ಈ ಮೂಲಕ ಸಿಡಿ ಪ್ರಕರಣದ ಆರೋಪಿಯಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಓದಿ:ಕಾವೇರಿ - ಪೆನ್ನಾರ್ ನದಿ ಜೋಡಣೆ ಕೇಂದ್ರದ ಏಕಮುಖ ನಿರ್ಧಾರ: ಸಿದ್ದರಾಮಯ್ಯ

ಆತ್ಯಾಚಾರ ಎಸಗಿರುವುದಾಗಿ ಯುವತಿ ನೀಡಿದ್ದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ ಚಿಟ್ ನೀಡಿದೆ‌‌. ಈ ಸಂಬಂಧ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ‌.

ಓದಿ:2015ರಲ್ಲೆ ತನ್ನ ಮಾವನನ್ನು ಚೀನಾದ ಸೈನಿಕರು ಕರೆದೊಯ್ದಿದ್ದಾರೆ: ಅರುಣಾಚಲ​ ಪ್ರದೇಶ ಮಹಿಳೆ ಆರೋಪ

ಸಾಕ್ಷ್ಯಾಧಾರ ಕೊರತೆ ಹಾಗೂ ತನಿಖೆಯಲ್ಲಿ ಮಾಜಿ ಸಚಿವರ ಪಾತ್ರ ಕಂಡು ಬರದ ಹಿನ್ನೆಲೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಇಂದು ಎಸ್ಐಟಿ ತನಿಖಾಧಿಕಾರಿಗಳು ಬಿ ರಿಪೋರ್ಟ್​ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?:ಯುವತಿಯೊಬ್ಬಳಿಗೆ ನೌಕರಿ ಕೊಡಿಸುವುದಾಗಿ ಆಮಿಷವೊಡ್ಡಿ ಸಚಿವರು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದ ಸಿಡಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಈ ಆರೋಪದ ಹಿನ್ನೆಲೆಯಲ್ಲಿ, ಮಾರ್ಚ್​ 3 ರಂದು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್​ ಜಾರಕಿಹೊಳಿ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆಗ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪಗೆ ರಾಜೀನಾಮೆ ಪತ್ರ ರವಾನೆ ಮಾಡಿ ತಮ್ಮ ನಿಲುವನ್ನು ತಿಳಿಸಿದ್ದರು. ಯಡಿಯೂರಪ್ಪ ರಮೇಶ್​ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಆಗ ರಾಜ್ಯಪಾಲರಾಗಿದ್ದ ವಜುಭಾಯಿ ವಾಲಾ ಅವರಿಗೆ ಕಳುಹಿಸಿದ್ದರು. ವಜುಭಾಯಿ ವಾಲಾ, ರಮೇಶ್​ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಿದ್ದರು.

ಇದಾದ ಬಳಿಕ ಸರ್ಕಾರ ಪ್ರಕರಣದ ತನಿಖೆಗೆ ಎಸ್​ಐಟಿಗೆ ವಹಿಸಿತ್ತು. ಅತ್ತ ಸಂತ್ರಸ್ತ ಯುವತಿ ಈ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದರು.

Last Updated : Feb 4, 2022, 1:59 PM IST

For All Latest Updates

TAGGED:

ABOUT THE AUTHOR

...view details