ಬೆಂಗಳೂರು : ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತ ಆರೋಪಿ ಐಎಂಎ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಇದೇ ವೇಳೆ ಎಸ್ಐಟಿ ಅಧಿಕಾರಿಗಳು ಇಬ್ಬರೂ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್,ಜಮೀರ್‌ಗೆ ಎಸ್ಐಟಿ ನೋಟಿಸ್ - undefined
ಬಹುಕೋಟಿ ವಂಚನೆ ಪ್ರಕರಣದಲ್ಲಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್‌ಗೆ ವಿಚಾರಣೆಗೆ ಹಾಜರಾಗುವಂತೆ SIT ನೋಟಿಸ್ ಜಾರಿ ಮಾಡಿದೆ.
![ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್,ಜಮೀರ್‌ಗೆ ಎಸ್ಐಟಿ ನೋಟಿಸ್](https://etvbharatimages.akamaized.net/etvbharat/prod-images/768-512-3937327-thumbnail-3x2-ima.jpg)
ಶಿವಾಜಿನಗರ ಶಾಸಕ ರೋಷನ್ ಬೇಗ್ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಇದೇ ತಿಂಗಳು 29 ರಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ತನಿಖಾಧಿಕಾರಿ ಗಿರೀಶ್ ನೋಟಿಸ್ ಜಾರಿ ಮಾಡಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ಮನ್ಸೂರ್ ಜೊತೆ ಹಣದ ಅವ್ಯವಹಾರ ನಡೆದಿದೆ ಎಂಬ ಆರೋಪದ ಆಧಾರದ ಮೇಲೆ ಇಡಿ ಅಧಿಕಾರಿಗಳು ಜು.5 ರಂದು ಜಮೀರ್ ವಿಚಾರಣೆ ಮಾಡಿದ್ದರು.
ಬಳಿಕ ರೋಷನ್ ಬೇಗ್ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ತೆರಳುವ ವೇಳೆ ಎಸ್ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೇ ಮೊದಲ ಬಾರಿಗೆ ಇಬ್ಬರು ಶಾಸಕರಿಗೆ ನೋಟಿಸ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.