ಬೆಂಗಳೂರು: ಸಿಡಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ನಿನ್ನೆ ಸದಾಶಿವನಗರದಲ್ಲಿರುವ ಜಾರಕಿಹೊಳಿ ನಿವಾಸಕ್ಕೆ ತೆರಳಿ ನಾಲ್ಕು ಪುಟಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ವಿಡಿಯೋ ವಿಚಾರ ನಾಲ್ಕು ತಿಂಗಳ ಹಿಂದೆಯೇ ಮಾಜಿ ಶಾಸಕ ನಾಗರಾಜ್ ಮೂಲಕ ನನಗೆ ತಿಳಿದಿತ್ತು. ವಿಡಿಯೋ ಮುಂದಿಟ್ಟು ಐದು ಕೋಟಿ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಇತ್ತು. ಈ ಬಗ್ಗೆ ನಾನು ತಲೆ ಕೆಡಿಸಿಕೊಂಡಿರಲಿಲ್ಲ. ನಂತರ ತನ್ನ ರಾಜಕೀಯ ತೇಜೋವಧೆ ಮಾಡಲು ಹೀಗೆ ಮಾಡಿದ್ದಾರೆ.