ಬೆಂಗಳೂರು: ಐತಿಹಾಸಿಕ ದಸರಾ ಮಹೋತ್ಸವವನ್ನು ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಸೆಪ್ಟೆಂಬರ್ 28ರಂದು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಲ್ಲಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ದಸರಾ ಆಚರಿಸಲು ₹ 20.50 ಕೋಟಿಯನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು. ಈ ಬಾರಿ ಹೊರ ರಾಜ್ಯದ ಕಲಾವಿದರನ್ನು ಕರೆಸುವುದಕ್ಕಿಂತ ನಮ್ಮ ರಾಜ್ಯದಲ್ಲಿಯೇ ಪ್ರತಿಭಾವಂತ ಕಲಾವಿದರಿಗೆ ಅವಕಾಶ ನೀಡುವುದರಿಂದ ಖರ್ಚಿನ ಹೊರೆಯನ್ನು ತಗ್ಗಿಸಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.
ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸುತ್ತೇವೆ ಎಂದು ಈ ಹಿಂದೆ ಹೇಳಿದ್ದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರಲಿಲ್ಲ. ಪ್ರವಾಸಿಗರು ಬರದೆ ಹೋಗಿದ್ದರಿಂದ ಆರ್ಥಿಕ ಚಟುವಟಿಕೆಗಳು ನೀರಸವಾದವು. ಇದನ್ನು ಗಮನದಲ್ಲಿಟ್ಟುಕೊಂಡು ಮಹೋತ್ಸವ ಆಚರಿಸೋಣ ಎಂದು ಹಲವರು ಹೇಳಿದರು.
ದೀಪಾಲಂಕಾರಗಳು ಹೊರತು ಪಡಿಸಿ ಉಳಿದೆಲ್ಲವೂ ನಿಗಧಿತ ಪಟ್ಟಿಯಂತೆ ನಡೆಯುತ್ತವೆ. ಮುಂದಿನ ಯಾವುದೇ ಬದಲಾವಣೆಗಳು ಘಟಿಸಿದಲ್ಲಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.