ಬೆಂಗಳೂರು: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಒಕ್ಕೂಟ, ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಕೈಗಾರಿಕಾ ಸಂಘಟನೆಗಳ ಪ್ರಮುಖರು ಇಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಕುಮಾರಸ್ವಾಮಿ ಭೇಟಿ ಮಾಡಿದ ಸಣ್ಣ ಕೈಗಾರಿಕೆಗಳ ಒಕ್ಕೂಟದ ಪದಾಧಿಕಾರಿಗಳು - ಮಾಜಿ ಸಿಎಂ ಕುಮಾರಸ್ವಾಮಿ
ಲಾಕ್ಡೌನ್ ಪರಿಸ್ಥಿತಿಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಕೈಗಾರಿಕಾ ಸಂಘಟನೆಗಳ ಪ್ರಮುಖರು.

ಮಾಜಿ ಸಿಎಂ ಕುಮಾರಸ್ವಾಮಿ
ಜೆಪಿ ನಗರದ ತಮ್ಮ ನಿವಾಸದಲ್ಲಿ ಭೇಟಿ ಮಾಡಿದ ಉದ್ಯಮಿಗಳು, ಲಾಕ್ಡೌನ್ ಪರಿಸ್ಥಿತಿಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ, ಕೈಗಾರಿಕೋದ್ಯಮಿಗಳ ನೆರವಿಗೆ ಸ್ಪಂದಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.
ಕೈಗಾರಿಕಾ ಸಂಘಟನೆಗಳ ಪ್ರಮುಖರಾದ ಆರ್ .ರಾಜು, ಹನುಮಂತೇಗೌಡ, ರಾಜಗೋಪಾಲ್, ಬೋರೇಗೌಡ, ಕೆ.ಎನ್. ನರಸಿಂಹಮೂರ್ತಿ, ಶ್ರೀನಿವಾಸ್ ಹಾಗೂ ಮಲ್ಲೇಶಗೌಡ ಸೇರಿದಂತೆ ಇತರರು ಈ ಸಭೆಯಲ್ಲಿ ಉಪಸ್ಥಿತರಿದ್ದರು.