ಕರ್ನಾಟಕ

karnataka

ETV Bharat / state

ಅಸೋಚಾಂ ಜತೆ ಸೇರಿ ವರ್ಷದಲ್ಲಿ 10 ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮ: ಸಚಿವ ಅಶ್ವತ್ಥನಾರಾಯಣ - ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ರಾಜ್ಯವು ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲಕ್ಕೆ ಹೆಸರಾಗಿದೆ. ಇಡೀ ದೇಶವು ಈ ವಿಚಾರದಲ್ಲಿ ನಮ್ಮನ್ನು ಅನುಸರಿಸುತ್ತಿದೆ. ಉದ್ಯಮ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಜತೆಗೂಡಿದರೆ ಎಂತಹ ಪರಿವರ್ತನೆಯನ್ನಾದರೂ ತರಬಹುದು ಎಂದು ಅಶ್ವತ್ಥನಾರಾಯಣ ಹೇಳಿದರು.

ಡಾ.ಸಿ.ಎನ್.ಅಶ್ವತ್ಥನಾರಾಯಣ
ಡಾ.ಸಿ.ಎನ್.ಅಶ್ವತ್ಥನಾರಾಯಣ

By

Published : Dec 3, 2021, 3:41 PM IST

ಬೆಂಗಳೂರು:ಕೈಗಾರಿಕಾ ಬೆಳವಣಿಗೆಗೆ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಶಸ್ತ ತಾಣವಾಗಿದ್ದು, ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಅಸೋಚಾಂ) ಜತೆ ಮುಂದಿನ ಒಂದು ವರ್ಷದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಗರಿಷ್ಠ ಹತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ಅಸೋಚಾಂ ಹಮ್ಮಿಕೊಂಡಿದ್ದ ಸ್ಮಾರ್ಟ್ ಟೆಕ್ ಇಂಡಿಯಾ-2021’ ಸಮಾವೇಶದಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಹೇಳಿಮಾಡಿಸಿದಂತಹ ಹಲವಾರು ನೀತಿಗಳು ಮತ್ತು ಕಾರ್ಯ ಪರಿಸರವಿದೆ. ಕೈಗಾರಿಕಾ ವಲಯದ ಬೆಳವಣಿಗೆಗೆ ಪೂರಕವಾಗಿ ಯಾವುದೇ ಬದಲಾವಣೆ ಬೇಕೆನಿಸಿದರೆ ಅದನ್ನು ಕ್ಷಿಪ್ರಗತಿಯಲ್ಲಿ ಮಾಡಲು ರಾಜ್ಯ ಸರಕಾರ ಸಿದ್ಧವಿದೆ’ ಎಂದರು.

ರ್ಟ್ ಟೆಕ್ ಇಂಡಿಯಾ-2021 ಸಮಾವೇಶ

ರಾಜ್ಯವು ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲಕ್ಕೆ ಹೆಸರಾಗಿದೆ. ಇಡೀ ದೇಶವು ಈ ವಿಚಾರದಲ್ಲಿ ನಮ್ಮನ್ನು ಅನುಸರಿಸುತ್ತಿದೆ. ಉದ್ಯಮ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಜತೆಗೂಡಿದರೆ ಎಂತಹ ಪರಿವರ್ತನೆಯನ್ನಾದರೂ ತರಬಹುದು ಎಂದು ಅವರು ಪ್ರತಿಪಾದಿಸಿದರು.

ಪ್ರಧಾನಿ ಮೋದಿ ಅವರಿಗೆ ಉದ್ಯಮಗಳ ಬೆಳವಣಿಗೆಗೆ ಎಂತಹ ರಚನಾತ್ಮಕ ಕ್ರಮಗಳು ಅಗತ್ಯವೆನ್ನುವುದರ ಸ್ಪಷ್ಟವಾದ ಅರಿವಿದೆ. ರಾಜ್ಯವೂ ಸಹ ಇದೇ ನಿಟ್ಟಿನಲ್ಲಿ ದಾಪುಗಾಲಿಡುತ್ತಿದೆ. ಈಗ ಜಾರಿಗೆ ತರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಉದ್ಯೋಗರಂಗದ ಸಮಸ್ಯೆಗಳಿಗೆ ಸಮರ್ಥ ಪರಿಹಾರವಾಗಿದೆ ಎಂದು ಸಚಿವರು ನುಡಿದರು.

ನೂತನ ಶಿಕ್ಷಣ ನೀತಿಯನ್ನು ಉದ್ಯೋಗ ಮತ್ತು ಕೌಶಲಕೇಂದ್ರಿತವನ್ನಾಗಿ ಮಾಡಲಾಗಿದ್ದು, ಶಿಕ್ಷಣ ಸಂಸ್ಥೆಗಳೊಂದಿಗೆ ಉದ್ದಿಮೆಗಳನ್ನು ಬೆಸೆಯಲಾಗುತ್ತಿದೆ. ಇವು ಕೇವಲ ಕ್ಯಾಂಪಸ್ ಸಂದರ್ಶನದ ಸಮಯವಲ್ಲದೇ ಇನ್ಮುಂದೆ ಇಡೀ ಶೈಕ್ಷಣಿಕ ವರ್ಷದುದ್ದಕ್ಕೂ ವಿದ್ಯಾಸಂಸ್ಥೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿವೆ ಎಂದು ಅವರು ನುಡಿದರು.

ದೇಶದ ಉದ್ಯಮ ವಲಯಕ್ಕೆ ಅಗಾಧ ಪ್ರಮಾಣದಲ್ಲಿ ಕೌಶಲ್ಯಪೂರ್ಣ ಅಭ್ಯರ್ಥಿಗಳು ಬೇಕಾಗಿದ್ದಾರೆ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ, ಸ್ವಾತಂತ್ರ್ಯ ಕೊಡಲಾಗುತ್ತಿದ್ದು, ವಿಕೇಂದ್ರೀಕರಣಗೊಳಿಸಲಾಗುತ್ತಿದೆ. ಶಿಕ್ಷಣದ ವಿಚಾರದಲ್ಲಿ ಸರಕಾರವು ಉದಾರವಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಇದೇ ಸಂದರ್ಭದಲ್ಲಿ ಉದ್ಯಮರಂಗದ ನಾನಾ ವಲಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಎಲ್ ಅಂಡ್ ಟಿ ಟೆಕ್ನಾಲಜೀಸ್, ಇನ್ಸೊಲ್ಯೂಷನ್ಸ್ ಗ್ಲೋಬಲ್ ಲಿಮಿಟೆಡ್, ಬ್ಲೂ ಕಕೂನ್ ಡಿಜಿಟಲ್, ತಿರುಪತಿ ಗ್ರೂಪ್, ಎಸ್-ಮೆಂಟರ್ ಸೊಲ್ಯೂಷನ್ಸ್ ಮತ್ತು ಅಪಿರಿಯ್ರೋನ್ ಟೆಕ್ನೋ ವೆಂಚರ್ಸ್ ಕಂಪನಿಗಳಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು.

ABOUT THE AUTHOR

...view details