ಕರ್ನಾಟಕ

karnataka

By

Published : Aug 26, 2019, 11:22 PM IST

ETV Bharat / state

ಖಾಸಗಿ ಹೋಟೆಲ್​​ಗಳಲ್ಲಿ ಧೂಮಪಾನ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್​..!

ಖಾಸಗಿ ಹೊಟೇಲ್ಗಳಲ್ಲಿ ಸಾರ್ವಜನಿಕರ ಮುಂದೆ ಧೂಮಪಾನ ಸೇದುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಬೆಂಗಳೂರು:ಖಾಸಗಿ ಹೋಟೆಲ್​ಗಳಲ್ಲಿ ಸಾರ್ವಜನಿಕರ ಮುಂದೆ ಧೂಮಪಾನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೊಟಿಸ್ ಜಾರಿಗೊಳಿಸಿದೆ.

ಈ ಕುರಿತು ‘ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸೆಸ್ ಲಿಮಿಟೆಡ್ (ಎಚ್‌ಸಿಜಿ ಆಸ್ಪತ್ರೆ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಈ ವೇಳೆ ಅರ್ಜಿದಾರರ ಪರ ವಕೀಲರು 2003ರ ಧೂಮಪಾನ ನಿಷೇಧ ಕಾಯ್ದೆಯ ಸೆಕ್ಷನ್ 4ರ ಅನ್ವಯ 30 ಕೊಠಡಿಗಳು ಹಾಗೂ 30 ಆಸನಗಳನ್ನ ಹೊಂದಿರುವ ಹೋಟೆಲ್​ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಮೀಸಲಿಡಲು ಅವಕಾಶ ಕಲ್ಪಿಸಿದೆ ಎಂದಿದ್ದಾರೆ.

ಆದರೆ, ಖಾಸಗಿ ಹೋಟೆಲ್​, ರೆಸ್ಟೋರೆಂಟ್ ನಲ್ಲಿ ಸದ್ಯ ಸಾರ್ವಜನಿಕರಿಗೆ ಸ್ಮೋಕಿಂಗ್ ಕಿರಿಕಿರಿಯಾಗುತ್ತಿದೆ. ಹಾಗೆಯೇ ಹೋಟೆಲ್​ಗಳಲ್ಲಿ ಸ್ಮೋಕಿಂಗ್ ಜೋನ್ ಗಳನ್ನು ಪ್ರತ್ಯೇಕವಾಗಿ ವಿಭಾಗಿಸಿಲ್ಲವೆಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವೇಳೆ ನ್ಯಾಯಪೀಠ ‌ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಾಜ್ಯ ಸರ್ಕಾರದ ನಗರಾಭಿವದ್ಧಿ ಇಲಾಖೆ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆ.24ಕ್ಕೆ ಮುಂದೂಡಿಕೆ ಮಾಡಿದೆ.

ABOUT THE AUTHOR

...view details