ಬೆಂಗಳೂರು :ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸೋಲಾರ್ ವಿದ್ಯುತ್ ಅಳವಡಿಕೆಗೆ 15 ದಿನದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್‌ಗಳಿಗೆ ಸೋಲಾರ್ ವಿದ್ಯುತ್ ಅಳವಡಿಕೆ: ಸಚಿವ ಕೆ ಎಸ್ ಈಶ್ವರಪ್ಪ - ಕಾಂಗ್ರೆಸ್ ಸದಸ್ಯ ಎಸ್. ರವಿ
ಗ್ರಾಮ ಪಂಚಾಯತ್‌ಗಳಲ್ಲಿ ಲಭ್ಯವಿರುವ ಗಣಕಯಂತ್ರ, ಇಂಟರ್ನೆಟ್ ವ್ಯವಸ್ಥೆ ಉಪಯೋಗಿಸಿ ಬಾಪೂಜಿ ಸೇವಾ ಕೇಂದ್ರದ ಮೂಲಕ ಸಕಾಲಕ್ಕೆ ಸಾರ್ವಜನಿಕರಿಗೆ ಸೇವೆ ನೀಡಲಾಗುತ್ತಿದೆ. ಗ್ರಾಮ ಪಂಚಾಯತ್‌ಗಳ ಡಾಟಾ ಎಂಟ್ರಿ ಆಪರೇಷಟರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆಯಂತೆ.

ಇಂದು ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಎಸ್ ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮ ಪಂಚಾಯತ್‌ಗಳಲ್ಲಿ ವಿದ್ಯುತ್ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಹಾಗಾಗಿ, ಸೋಲಾರ್ ವಿದ್ಯುತ್ ಅಳವಡಿಸಲಾಗುವುದು. ಇದರಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ ಎಂದರು.
ಗ್ರಾಮ ಪಂಚಾಯತ್‌ಗಳಲ್ಲಿ ಲಭ್ಯವಿರುವ ಗಣಕಯಂತ್ರ, ಇಂಟರ್ನೆಟ್ ವ್ಯವಸ್ಥೆ ಉಪಯೋಗಿಸಿಕೊಂಡು ಬಾಪೂಜಿ ಸೇವಾ ಕೇಂದ್ರದ ಮೂಲಕ ಸಕಾಲಕ್ಕೆ ಸಾರ್ವಜನಿಕರಿಗೆ ಸೇವೆ ನೀಡಲಾಗುತ್ತಿದೆ. ಗ್ರಾಮ ಪಂಚಾಯತ್‌ಗಳ ಡಾಟಾ ಎಂಟ್ರಿ ಆಪರೇಷಟರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ನೇಮಕಾತಿಗೆ ಮೀಸಲಾತಿ ನೀಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.