ಕರ್ನಾಟಕ

karnataka

ETV Bharat / state

ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಸಿದ್ದರಾಮಯ್ಯ ಟ್ವೀಟ್​ ಮೂಲಕ ಆಗ್ರಹ

ಕಲಬುರ್ಗಿಯ ರೈತನೊಬ್ಬ ತಾನು ಬೆಳೆದ ಕಲ್ಲಂಗಡಿ ಮಾರಾಟ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಪರಿಸ್ಥಿತಿ ಕೈ ಮೀರುವ ಮೊದಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರೈತರ ಕಷ್ಟ ನಿವಾರಣೆಗೆ ಕಾರ್ಯಪ್ರವೃತ್ತರಾಗಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Opposition leader Siddaramaiah tweet
ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್

By

Published : Mar 31, 2020, 7:38 PM IST

ಬೆಂಗಳೂರು :ಲಾಕ್​ಡೌನ್​ ಸಂದರ್ಭದಲ್ಲಿ ಸಂಕಷ್ಟಕ್ಕೀಡಾಗಿರುವ ರೈತರ ಸಹಕಾರಕ್ಕೆ ಸರ್ಕಾರ ಮುಂದಾಗಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ಕಲಬುರ್ಗಿಯ ರೈತನೊಬ್ಬ ತಾನು ಬೆಳೆದ ಕಲ್ಲಂಗಡಿ ಮಾರಾಟ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಪರಿಸ್ಥಿತಿ ಕೈಮೀರುವ ಮೊದಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರೈತರ ಕಷ್ಟ ನಿವಾರಿಸಲು ಕಾರ್ಯಪ್ರವೃತ್ತರಾಗಬೇಕು ಎಂದಿದ್ದಾರೆ. ಒಂದೆಡೆ ರೈತರು ಬೆಳೆದ ಬೆಳೆ ಮಾರಾಟ ಮಾಡಲಾಗದೆ ಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಬಳಕೆದಾರರು ತರಕಾರಿ ಹಾಗೂ ಹಣ್ಣುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಈ ಸಮಸ್ಯೆ ನಿವಾರಿಸಲು ಹಾಪ್‌ಕಾಮ್ಸ್‌ ರೈತರಿಂದ ಖರೀದಿಸಿ ಬಳಕೆದಾರರಿಗೆ ಮಾರಾಟ ಮಾಡಲು ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.

ವ್ಯಾಪಾರಿಗಳಿಂದ ಸುಲಿಗೆ:ಅಗತ್ಯ ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ ಎಂಬುದನ್ನೇ ನೆಪ ಮಾಡಿ ವ್ಯಾಪಾರಿಗಳು ತರಕಾರಿ-ಹಣ್ಣು ಮತ್ತು ಆಹಾರ ಸಾಮಗ್ರಿಗಳ ಬೆಲೆ ಹೆಚ್ಚಿಸಿ ಬಳಕೆದಾರರ ಸುಲಿಗೆ ನಡೆಸುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿವೆ. ಹಾಗಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಗಮನಹರಿಸಿ ಕ್ರಮಕೈಗೊಳ್ಳಬೇಕು. ಕೇಂದ್ರ ಸರ್ಕಾರ ರೈತರಿಂದ ಬೆಂಬಲ ಬೆಲೆ ಖರೀದಿಸುವ ತೊಗರಿಯ ಪ್ರಮಾಣವನ್ನು 20 ಕ್ವಿಂಟಲ್‌ಗೆ ಹೆಚ್ಚಿಸಲು ನಿರಾಕರಿಸಿರುವುದು ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಂಬಲ ಬೆಲೆಗೆ ಖರೀದಿಸುವ ತೊಗರಿಯನ್ನು 20 ಕ್ವಿಂಟಲ್‌ಗೆ ಹೆಚ್ಚಿಸಲು ಯಡಿಯೂರಪ್ಪ ಮಾಡಿರುವ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಬೆಂಬಲ ಬೆಲೆಗೆ ತೊಗರಿ ಖರೀದಿಸಿ ಪಡಿತರ ಅಂಗಡಿಗಳಲ್ಲಿ ವಿತರಿಸುವ ವ್ಯವಸ್ಥೆ ಮಾಡಬೇಕು. ರಾಜ್ಯದಲ್ಲಿ ಅಕ್ಕಿ ಗಿರಣಿಗಳನ್ನು ಮುಚ್ಚಿರುವ ಕಾರಣ ಪೂರೈಕೆ ಇಲ್ಲದೆ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಏರತೊಡಗಿದೆ. ಇದರಿಂದಾಗಿ ಅಕ್ರಮ ದಾಸ್ತಾನಿನ ಆರೋಪ ಕೇಳಿಬರುತ್ತಿದೆ. ರಾಜ್ಯಸರ್ಕಾರ ಮಧ್ಯಪ್ರವೇಶಿಸಿ ಅಕ್ಕಿ ಗಿರಣಿಗಳನ್ನು ತೆರೆಸಿ ಅಕ್ಕಿ ಪೂರೈಕೆಯನ್ನು ಸುಗಮಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ABOUT THE AUTHOR

...view details