ಬೆಂಗಳೂರು :ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಪ್ರಥಮ ಪ್ರಜೆ ರಾಜ್ಯಪಾಲರಿಗೆ ದಸರಾ ಸಮಿತಿ ಆಹ್ವಾನ ನೀಡಿದ್ದು, ಮಹೋತ್ಸವದಲ್ಲಿ ಪಾಲ್ಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ.
ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರಿಗೆ ಸಚಿವ ಸೋಮಣ್ಣ ಆಹ್ವಾನ... - ಸಮಿತಿ ಸದಸ್ಯರಿಗೆ ಭರವಸೆ
ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಪ್ರಥಮ ಪ್ರಜೆ ರಾಜ್ಯಪಾಲರಿಗೆ ದಸರಾ ಸಮಿತಿ ಆಹ್ವಾನ ನೀಡಿದ್ದು, ಮಹೋತ್ಸವದಲ್ಲಿ ಪಾಲ್ಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ.

ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರಿಗೆ ಸಚಿವ ಸೋಮಣ್ಣ ಆಹ್ವಾನ
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಸತಿ ಸಚಿವ ವಿ.ಸೋಮಣ್ಣ ಶುಕ್ರವಾರ ರಾಜಭವನಕ್ಕೆ ಮೈಸೂರು ಜಿಲ್ಲಾಧಿಕಾರಿಗಳು, ಇತರ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರೊಂದಿಗೆ ತೆರಳಿ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ನಾಡಹಬ್ಬಕ್ಕೆ ಆಗಮಿಸಲು ಆಹ್ವಾನ ನೀಡಿದ್ದಾರೆ.
ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಸಂತೋಷದಿಂದ ದಸರಾ ಸಮಿತಿ ಸದಸ್ಯರಿಗೆ ಭರವಸೆ ನೀಡಿದ್ದಾರೆ. ಹಿರಿಯ ಸಾಹಿತಿ ಡಾ. ಎಸ್ ಎಲ್ ಭೈರಪ್ಪನವರು ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.
Last Updated : Sep 14, 2019, 7:23 AM IST