ಬೆಂಗಳೂರು : ಸಿದ್ದರಾಮಯ್ಯ ಸಾಹೇಬರು ಹಗಲು ಕನಸು ಕಾಣ್ತಿದ್ದಾರೆ. ಅವರು ವಿರೋಧ ಪಕ್ಷದ ಸ್ಥಾನವನ್ನೂ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಸಿದ್ದರಾಮಯ್ಯಗೆ ಸಚಿವ ಸೋಮಣ್ಣ ಟಾಂಗ್ ಕೊಟ್ಟರು.
ಸಿದ್ದರಾಮಯ್ಯ ಸಾಹೇಬರು ಹಗಲು ಕನಸು ಕಾಣ್ತಿದ್ದಾರೆ : ಸೋಮಣ್ಣ - Somanna Talk Against To Siddaramayya
ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದು ಹಗಲು ಕನಸು ಕಾಣ್ತಿದ್ದಾರೆ. ಪಕ್ಷದಲ್ಲಿ ಏಕಾಂಗಿಯಾಗಿದ್ದಾರೆ. ಅವರಿಗೆ ಹೇಳೋರಿಲ್ಲ, ಕೇಳೋರಿಲ್ಲ ಎಂದು ಸಿದ್ದರಾಮಯ್ಯಗೆ ಸಚಿವ ಸೋಮಣ್ಣ ಟಾಂಗ್ ಕೊಟ್ಟರು.
ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದು ಹಗಲು ಕನಸು ಕಾಣ್ತಿದ್ದಾರೆ. ಪಕ್ಷದಲ್ಲಿ ಏಕಾಂಗಿಯಾಗಿದ್ದಾರೆ. ಅವರಿಗೆ ಹೇಳೋರಿಲ್ಲ, ಕೇಳೋರಿಲ್ಲ. ಒಂಟಿ ಸಲಗ ಏನೇನೋ ಮಾತಾಡ್ತಾರೆ ಮಾತಾಡಿಕೊಳ್ಳಲಿ. ನಾವು ಏನೂ ಹೇಳುವುದಕ್ಕೆ ಆಗುವುದಿಲ್ಲ ಎಂದರು.
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಸರ್ಕಾರ ನಡೆಸಿದ್ದಾರೆ. ಅವರು ಯಾವ ರೀತಿ ಮಾತನಾಡಬೇಕು ಎಂಬುದು ಅವರಿಗೆ ಬಿಟ್ಟದ್ದು. ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ 15 ಕ್ಕೆ 15 ಕ್ಷೇತ್ರಗಳಲ್ಲಿ ಗೆದ್ದರು ಆಶ್ಚರ್ಯಪಡಬೇಕಿಲ್ಲ. ಬಿಜೆಪಿ ಗಾಳಿ ಎನ್ನುವುದಕ್ಕಿಂತ ಬದಲಾಗಿ, ರಾಜ್ಯದಲ್ಲಿ ಸ್ಥಿರವಾದ ಸರ್ಕಾರ ಇರಬೇಕು ಎಂದು ಹೇಳಿದರು.