ಕರ್ನಾಟಕ

karnataka

ETV Bharat / state

ಕೊರೊನಾ ಎಫೆಕ್ಟ್​: ಅಧಿವೇಶನದಿಂದ ದೂರ ಉಳಿಯಲಿದ್ದಾರೆ ಕೆಲ ಸಚಿವರು, ಶಾಸಕರು? - ವಿಧಾನಸಭೆ ಅಧಿವೇಶನ

ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಆಹಾರ ಸಚಿವ ಕೆ.ಗೋಪಾಲಯ್ಯ, ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್​ ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

Some ministers not attend the session
ಕೊರೊನಾ ಎಫೆಕ್ಟ್​: ಅಧಿವೇಶನದಿಂದ ದೂರ ಉಳಿಯಲಿದ್ದಾರೆ ಕೆಲ ಸಚಿವರು, ಶಾಸಕರು

By

Published : Sep 19, 2020, 1:13 PM IST

ಬೆಂಗಳೂರು: ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಕೊರೊನಾ ಸೋಂಕು ಕಾಣಿಸಿಕೊಂಡಿರುವ ಸಚಿವರು ಮತ್ತು ಕೆಲ ಶಾಸಕರು ಕಲಾಪದಿಂದ ಬಹುತೇಕ ದೂರ ಉಳಿಯುವ ಸಾಧ್ಯತೆ ಇದೆ.

ಸಿಎಂ ಬಿ‌.ಎಸ್.ಯಡಿಯೂರಪ್ಪ ಸಂಪುಟದ ನಾಲ್ವರು ಸಚಿವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಎಲ್ಲರೂ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಅವರೆಲ್ಲರೂ ಅಧಿವೇಶನದಿಂದ ದೂರ ಉಳಿಯಲಿದ್ದಾರೆ. ಮೂರು ದಿನಗಳ ಹಿಂದೆಯಷ್ಟೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕಳೆದ ಒಂದು ವಾರದೊಳಗೆ 4 ಸಚಿವರಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ.

ಕಳೆದ ಸೋಮವಾರ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೆ ಪಾಸಿಟಿವ್ ಬಂದಿತ್ತು. ಮರುದಿನ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಅವರಿಗೆ ಕೊರೊನಾ ದೃಢಪಟ್ಟಿತ್ತು. ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್​​ ಅವರಿಗೆ ಕಳೆದ ವಾರ ಕೊರೊನಾ ಪಾಸಿಟಿವ್ ಬಂದಿತ್ತು. ಈ ನಾಲ್ವರು ಮಂದಿ ಸಚಿವರು ಕೆಲ ದಿನಗಳ ಮಟ್ಟಿಗೆ ಅಥವಾ ಈ ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆಯಿದೆ. ವೈದ್ಯಕೀಯ ನಿಗಾದಲ್ಲಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಪೂರ್ಣ ಗುಣಮುಖವಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆದರೂ ಒಂದು ವಾರ ಐಸೋಲೇಷನ್‍ನಲ್ಲಿ ಇರಬೇಕಾಗುತ್ತದೆ. ಇನ್ನು ಶಾಸಕ ಗೌರಿಶಂಕರ್ ಸೇರಿದಂತೆ ಕೆಲ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸೋಂಕು ದೃಢಪಟ್ಟಿದೆ.

ಅಧಿವೇಶನಕ್ಕೆ ಗೈರಾಗುವ ಸಚಿವರು: ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಐವರು ಸಚಿವರು ಹಾಗೂ ಸೋಂಕು ದೃಢಪಟ್ಟ ಶಾಸಕರು ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆಗಳಿವೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಆಹಾರ ಸಚಿವ ಕೆ.ಗೋಪಾಲಯ್ಯ, ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್​​ ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಗುಣಮುಖರಾದವರು: ಕಳೆದ ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಅರಣ್ಯ ಸಚಿವ ಆನಂದ್ ಸಿಂಗ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರಿಗೆ ಕೊರೊನಾ ಪಾಸಿಟಿವ್ ಬಂದು ಇದೀಗ ಎಲ್ಲರೂ ಗುಣಮುಖರಾಗಿದ್ದಾರೆ. ಹಾಗಾಗಿ ಇವರು ಅಧಿವೇಶನಕ್ಕೆ ಹಾಜರಾಗಲಿದ್ದಾರೆ.

ABOUT THE AUTHOR

...view details