ಬೆಂಗಳೂರು :ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಜೆಡಿಎಸ್ ಮುಖಂಡ ಹನುಮಂತಪ್ಪ ತಳವಾರ್ ನೇತೃತ್ವದಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ಗೆ ಸೇರ್ಪಡೆಯಾಗಿದ್ದಾರೆ.
ನಿವೃತ್ತ ಕೆಎಎಸ್ ಅಧಿಕಾರಿ ಭೀಮಪ್ಪ ತಳವಾರ ಸೇರಿ ಹಲವು ಕೈ ಕಾರ್ಯಕರ್ತರು ಜೆಡಿಎಸ್ಗೆ - ನಿವೃತ್ತ ಕೆಎಎಸ್ ಅಧಿಕಾರಿ ಭೀಮಪ್ಪ ತಳವಾರ ಜೆಡಿಎಸ್ಗೆ ಸೇರ್ಪಡೆ
ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. 2023ರ ವಿಧಾನಸಭೆ ಚುನಾವಣೆಗೆ ತಯಾರಾಗಬೇಕಿದೆ. ಅದಕ್ಕಿಂತ ಮೊದಲು ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಬರಲಿದ್ದು, ಈ ಚುನಾವಣೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಸಲಹೆ..
ಪಕ್ಷದ ಕಚೇರಿ ಜೆಪಿಭವನದಲ್ಲಿ ಬಾಗಲಕೋಟೆ ಜಿಲ್ಲೆಯ ಮುಖಂಡರ ಸಭೆ ಕರೆಯಲಾಗಿತ್ತು. ಹಾಗಾಗಿ, ಸಭೆ ನಡುವೆಯೇ ನಿವೃತ್ತ ಕೆಎಎಸ್ ಅಧಿಕಾರಿ ಭೀಮಪ್ಪ ತಳವಾರ ಹಾಗೂ ಬಾದಾಮಿಯ ಕಾಂಗ್ರೆಸ್ನ ಕೆಲವು ಕಾರ್ಯಕರ್ತರು ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕಿ ಅವರನ್ನು ಕುಮಾರಸ್ವಾಮಿಯವರು ಬರಮಾಡಿಕೊಂಡರು.
ನಂತರ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. 2023ರ ವಿಧಾನಸಭೆ ಚುನಾವಣೆಗೆ ತಯಾರಾಗಬೇಕಿದೆ. ಅದಕ್ಕಿಂತ ಮೊದಲು ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಬರಲಿದ್ದು, ಈ ಚುನಾವಣೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಈ ವೇಳೆ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.