ಬೆಂಗಳೂರು: ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಮನೆಯ ರಸ್ತೆಯಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನೆಡಸಲು ಮುಂದಾಗಿ ಹೈಡ್ರಾಮವೇ ನಡೆದಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸದಾಶಿವನಗರದ ನಿವಾಸದಲ್ಲೇ ಇರುವ ಮಾಹಿತಿ ಪಡೆದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಅಲ್ಲೇ ಜಮಾವಣೆಗೊಂಡಿದ್ದರು. ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಗೆ ಮುಂದಾಗಿ ಘೋಷಣೆ ಕೂಗಿದರು.
ಪ್ರತಿಭಟಿಸಲು ಮುಂದಾದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಈ ಸುದ್ದಿಯನ್ನೂ ಓದಿ:ಡಿಕೆಶಿ ಬೆಂಬಲಿಸಿ ಕೈ ಕಾರ್ಯಕರ್ತರ ಪ್ರತಿಭಟನೆ: ಸದಾಶಿವನಗರದಲ್ಲಿ ಹೈಡ್ರಾಮ
ಕನ್ನಡ ಪರ ಸಂಘಟನೆಗಳು ಮನೆ ಮುಂದೆ ನುಗ್ಗಲು ಪ್ರಯತ್ನಿಸಿದಾಗ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಇಬ್ಬರ ನಡುವೆ ವಾಗ್ವಾದ ನಡೆಯಿತು. ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಅಲ್ಲಿಂದ ಕರೆದೊಯ್ಯಲಾಯಿತು.
ಮಾತಿಗೆ ಮಾತು ಬೆಳೆದು ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಈ ಮೊದಲು ಕೈ ಕಾರ್ಯಕರು ಸಹ ರಮೇಶ್ ಜಾರಕಿಹೊಳಿ ಮನೆಯ ಮುಂದೆ ಘೋಷಣೆ ಕೂಗಲು ಮುಂದಾಗಿದ್ದರು.