ಬೆಂಗಳೂರು:ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಗಳಿಗೆ ಸಹಾಯ ಮಾಡಿರುವ ಆರೋಪದಡಿ ಮಾಜಿ ಶಾಸಕ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಪೊಲೀಸರು ಬಂಧಿಸಿದ್ದಾರೆ.
ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಡ್ರಗ್ ಪೆಡ್ಲರ್ಗಳಿಗೆ ಆಶ್ರಯ ನೀಡುತ್ತಿದ್ದ, ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಗಳಿಗೆ ಸಹಾಯ ನೀಡಿರುವ ಹಾಗೂ ಪೆಡ್ಲರ್ಗಳಿಂದ ಡ್ರಗ್ ತರಿಸಿಕೊಳ್ಳುತಿದ್ದ ಆರೋಪದಡಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಡಾರ್ಕ್ ನೆಟ್ ಮೂಲಕ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದ ಮೇರೆಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರ ಜತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಹ ಪತ್ತೆ ಹಚ್ಚಿದ್ದಾರೆ.
ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ, ಹೇಮಂತ್ ಹಾಗೂ ಸುನೀಶ್ ಬಂಧಿತ ಆರೋಪಿಗಳು. ಬಂಧಿತರು ಡಾರ್ಕ್ ನೆಟ್ ಮೂಲಕ ವಿದೇಶಿ ಅಂಚೆ ಕಚೇರಿಯಿಂದ ಮಾದಕ ವಸ್ತು ಪಾರ್ಸೆಲ್ ತರಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದಿದ್ದ ಸಿಸಿಬಿ ನ.4 ರಂದು ಚಾಮರಾಜಪೇಟೆ ಪೋಸ್ಟ್ ಆಫೀಸ್ನಲ್ಲಿ ದಾಳಿ ನಡೆಸಿ ಆರೋಪಿ ಸುಜಯ್ನನ್ನು ಬಂಧಿಸಿ, ಗಾಂಜಾ ಜಪ್ತಿ ಮಾಡಿದ್ದರು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯದಲ್ಲಿ ಇನ್ನಿಬ್ಬರು ಆರೋಪಿಗಳ ಭಾಗಿಯಾಗಿರುವ ಬಗ್ಗೆ ಬಾಯ್ಬಿಟ್ಟಿದ್ದ.
ಮಾಹಿತಿ ಆಧರಿಸಿ ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇಬ್ಬರ ಜೊತೆಗೆ ಮಾಜಿ ಸಚಿವರ ಪುತ್ರ ಡ್ರಗ್ಸ್ ಪೆಡ್ಲರ್ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಎಂಬ ಆರೋಪದಡಿ ಆತನನ್ನು ಸಹ ಬಂಧಿಸಲಾಗಿದೆ.