ಕರ್ನಾಟಕ

karnataka

ETV Bharat / state

ಸೋನಿ ವರ್ಲ್ಡ್ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ: ಆಯುಕ್ತರಿಂದ ತಪಾಸಣೆ - BBMP Commissioner manjunath prasad

ಸೋನಿ ವರ್ಲ್ಡ್ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಪ್ರಗತಿಯನ್ನು ಆಯುಕ್ತರಾದ ಮಂಜುನಾಥ್ ಪ್ರಸಾದ್, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಆಯುಕ್ತರಿಂದ ಮೇಲ್ಸೇತುವೆ ಕಾಮಗಾರಿ ತಪಾಸಣೆ
ಆಯುಕ್ತರಿಂದ ಮೇಲ್ಸೇತುವೆ ಕಾಮಗಾರಿ ತಪಾಸಣೆ

By

Published : Sep 19, 2020, 12:00 AM IST

ಬೆಂಗಳೂರು:ಕೋರಮಂಗಲದ ಸೋನಿ ವರ್ಲ್ಡ್ ಜಂಕ್ಷನ್ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ಪ್ರಗತಿಯನ್ನು ಆಯುಕ್ತರಾದ ಮಂಜುನಾಥ್ ಪ್ರಸಾದ್, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕೊರಮಂಗಲ 100 ಅಡಿ ಮುಖ್ಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ, ಈಜೀಪುರ ಸಿಗ್ನಲ್‌ನಿಂದ ಕೇಂದ್ರೀಯ ಸದನ ಜಂಕ್ಷನ್‌ವರೆಗಿನ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ನಡೆಯುತ್ತಿದೆ. 2.5 ಕಿ.ಮೀ ಉದ್ದದ ಮೇಲ್ಸೇತುವೆಯನ್ನು 203 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಸೋನಿ ವರ್ಲ್ಡ್ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ

ಶೇ.45ರಷ್ಟು ಕಾಮಗಾರಿ ಮುಗಿದಿದೆ. ಶೇ.32 ರಷ್ಟು ಹಣ ಗುತ್ತಿಗೆದಾರರಿಗೆ ಬಿಡುಗಡೆಗೊಳಿಸಲಾಗಿದ್ದು, ಉಳಿದ ಮೊತ್ತವನ್ನು ಬಿಡುಗಡೆಗೊಳಿಸಲು ಕ್ರಮವಹಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. ಸೆಂಟ್ ಜಾನ್ಸ್ ರಿಸರ್ಚ್​​ ಇನ್ಸ್ಟಿಟ್ಯೂಟ್ ಕಾಲೇಜ್ ಬಳಿ 1 ರ‍್ಯಾಂಪ್ ಬರಲಿದ್ದು, ಜಾಗ ನೀಡುವಂತೆ ಸೆಂಟ್ ಜಾನ್ಸ್ ಕಾಲೇಜಿಗೆ ಕೇಳಲಾಗಿತ್ತು. ಆದರೆ ಇದುವರೆಗೆ ಜಾಗವನ್ನು ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಮಾತುಕತೆ ನಡೆಸಿ, ಜಾಗ ಪಡೆದು ಕಾಮಗಾರಿಗೆ ವೇಗ ನೀಡಲಾಗುವುದು. ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಪ್ರತಿ ತಿಂಗಳಿಗೊಮ್ಮೆ ಗುತ್ತಿಗೆದಾರರ ಜೊತೆ ಪರಿಶೀಲನಾ ಸಭೆ ನಡೆಸಲಾಗುವುದು ಎಂದರು.

ಮೇಲ್ಸೇತುವೆಗೆ ಒಟ್ಟು 81 ಪಿಲ್ಲರ್‌ಗಳು ಬರಲಿದ್ದು, ಈಗಾಗಲೇ 67 ಪಿಲ್ಲರ್‌ಗಳನ್ನು ಅಳವಡಿಸಲಾಗಿದೆ. ಮೇಲ್ಸೇತುವೆ ಮಾರ್ಗದಲ್ಲಿ 7 ಜಂಕ್ಷನ್‌ಗಳು ಬರಲಿದ್ದು, 4 ರ‍್ಯಾಂಪ್‌ಗಳನ್ನು ಅಳವಡಿಸಲಾಗುತ್ತಿದೆ. ರಸ್ತೆಯ ಎರಡು ಬದಿಯಲ್ಲಿ ತಲಾ ಎರಡು ಪಥಗಳು ಬರಲಿವೆ. ಮೇಲ್ಸೇತುವೆ ಮಾರ್ಗದಲ್ಲಿ 25 ಮರಗಳನ್ನು ಸ್ಥಳಾಂತರಿಸಲಾಗುವುದು. ಜೊತೆಗೆ ರಸ್ತೆ ಮಾರ್ಗದಲ್ಲಿ ಬರುವ 83 ಮರಗಳಲ್ಲಿ ರೆಂಬೆ-ಕೊಂಬೆಗಳನ್ನು ಕಟಾವು ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಆಯುಕ್ತರಿಂದ ಮೇಲ್ಸೇತುವೆ ಕಾಮಗಾರಿ ತಪಾಸಣೆ

ಮೇಲ್ಸೇತುವೆಯು ಕೇಂದ್ರೀಯ ಸದನ ಜಂಕ್ಷನ್ ಮೂಲಕ ತಾವರೆಕರೆ, ಎಂ.ಜಿ.ರಸ್ತೆ, ಹೊಸೂರು ರಸ್ತೆ, ಅಗರ, ಬಿಟಿಎಂ ಲೇಔಟ್, ಕೋರಮಂಗಲ, ಬಿಡಿಎ ಕಾಂಪ್ಲೆಕ್ಸ್, ಸರ್ಜಾಪುರ ಮುಖ್ಯರಸ್ತೆ ಹಾಗೂ ವಿವೇಕನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾದು ಹೋಗುತ್ತವೆ. ಸೋನಿ ವರ್ಲ್ಡ್ ಜಂಕ್ಷನ್ ಮೂಲಕ ಇಂದಿರಾನಗರ, ಕೇಂದ್ರೀಯ ಸದನ, ವಿವೇಕನಗರ, ಜಕ್ಕಸಂದ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾದು ಹೋಗುತ್ತವೆ. ಇದರಿಂದಾಗಿ ಈ ಭಾಗದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಇನ್ನು ಕಾಮಗಾರಿ ನಡೆಯುತ್ತಿರುವ ಭಾಗದ ರಸ್ತೆಗಳನ್ನು ದುರಸ್ತಿ ಪಡಿಸಿ, ವಿದ್ಯುತ್ ದೀಪ ಅಳವಡಿಸುವಂತೆ ಸ್ಥಳೀಯ ಶಾಸಕರಾದ ರಾಮಲಿಂಗಾ ರೆಡ್ಡಿ ಮನವಿ ಮಾಡಿದರು.

ಎಲಿವೇಟೆಡ್ ಕಾರಿಡಾರ್​ನಲ್ಲಿ ಬರುವ 7 ಜಂಕ್ಷನ್​ಗಳು:

1. ಈಜೀಪುರ ಮುಖ್ಯರಸ್ತೆ, ಒಳವರ್ತುಲ ರಿಂಗ್ ರಸ್ತೆ ಜಂಕ್ಷನ್

2. ಸೋನಿ ವರ್ಲ್ಡ್ ಜಂಕ್ಷನ್

3. ಕೇಂದ್ರೀಯ ಸದನ ಜಂಕ್ಷನ್

4. ಕೋರಮಂಗಲ 8ನೇ ಮುಖ್ಯ ರಸ್ತೆ ಜಂಕ್ಷನ್

5. ಕೋರಮಂಗಲ 60 ಅಡಿ ರಸ್ತೆ ಜಂಕ್ಷನ್

6. ಕೋರಮಂಗಲ ಐದನೇ ಬ್ಲಾಕ್ 1ಎ ಕ್ರಾಸ್ ರಸ್ತೆ ಜಂಕ್ಷನ್

7. ಕೊರಮಂಗಲ ಬಿಡಿಎ ಜಂಕ್ಷನ್

ABOUT THE AUTHOR

...view details