ಬೆಂಗಳೂರು:ವಿದ್ಯಾರ್ಥಿಗಳು ಮತ್ತು ಪೋಷಕರು ಎದುರು ನೋಡುತ್ತಿರುವ ಸಿಇಟಿ ಕೌನ್ಸೆಲಿಂಗ್ ಶೀಘ್ರವೇ ನಡೆಸಲಾಗುವುದು. ಈಗಾಗಲೇ ಕೌನ್ಸೆಲಿಂಗ್ ಮುಗಿಯಬೇಕಿತ್ತು. ಕೋವಿಡ್ ಕಾರಣದಿಂದ ತಡವಾಯಿತು. ಆದಷ್ಟು ಬೇಗ ದಿನಾಂಕ ಪ್ರಕಟ ಮಾಡಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.
ಶೀಘ್ರವೇ ಸಿಇಟಿ ಕೌನ್ಸೆಲಿಂಗ್ ದಿನಾಂಕ ಪ್ರಕಟ: ಡಿಸಿಎಂ ಅಶ್ವತ್ಥ ನಾರಾಯಣ - ಡಿಸಿಎಂ ಅಶ್ವಥ್ ನಾರಾಯಣ ಮಾಹಿತಿ
ಶಾಲೆ, ಪದವಿ ಪೂರ್ವ ಕಾಲೇಜುಗಳ ಆರಂಭ ಯಾವಾಗ ಅಂತ ಕೇಳಿದ ಪ್ರಶ್ನೆಗೆ, ಈಗ ಪದವಿ ಕಾಲೇಜುಗಳು ಪ್ರಾರಂಭವಾಗಿವೆ. ಇದರ ಸಾಧಕ-ಬಾಧಕ ನೋಡಿಕೊಂಡು ಶಾಲೆ-ಪದವಿ ಪೂರ್ವ ಕಾಲೇಜುಗಳನ್ನು ತೆರೆಯುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.
ಇನ್ನು ಶಾಲೆ, ಪದವಿ ಪೂರ್ವ ಕಾಲೇಜುಗಳ ಆರಂಭ ಯಾವಾಗ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಪದವಿ ಕಾಲೇಜುಗಳು ಪ್ರಾರಂಭವಾಗಿವೆ. ಇದರ ಸಾಧಕ-ಬಾಧಕ ನೋಡಿಕೊಂಡು ಶಾಲೆ-ಪದವಿ ಪೂರ್ವ ಕಾಲೇಜುಗಳನ್ನು ತೆರೆಯುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವರು ಮಾಹಿತಿ ನೀಡಲಿದ್ದಾರೆ ಎಂದರು.
ಉಳಿದಂತೆ ಅತಿಥಿ ಉಪನ್ಯಾಸಕರನ್ನು ಅವಶ್ಯಕತೆ ನೋಡಿಕೊಂಡು ನೇಮಕ ಮಾಡಿಕೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಧ್ಯಾಪಕರ ವರ್ಗಾವಣೆಯ ಬಗ್ಗೆ ಕ್ಯಾಬಿನೆಟ್ನಲ್ಲಿ ಒಪ್ಪಿಗೆ ಸಿಕ್ಕಿದೆ. ಶೀಘ್ರವೇ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದರು.