ಕರ್ನಾಟಕ

karnataka

ETV Bharat / state

ಆಗ್ನೇಯ ಪದವೀಧರ ಕ್ಷೇತ್ರ: ಎರಡನೇ ಸುತ್ತಲ್ಲಿ ಬಂಡಾಯ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಗೆ ಮುನ್ನಡೆ! - DT Srinivas

ಮಧ್ಯರಾತ್ರಿಗೆ ಮುಗಿದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಂಡಾಯ ಅಭ್ಯರ್ಥಿ ಹಾಗೂ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ 7798 ಮೊದಲ ಪ್ರಾಶಸ್ತ್ಯ ಮತಗಳನ್ನು ಗಳಿಸಿ ಮುನ್ನಡೆ ಸಾಧಿಸಿದ್ದಾರೆ.

Southeast Graduate election: Lead of  DT Srinivas in second round!
ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್

By

Published : Nov 11, 2020, 12:48 AM IST

Updated : Nov 11, 2020, 6:21 AM IST

ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದ ಎರಡನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಜೆಡಿಎಸ್ ಅಭ್ಯರ್ಥಿ ಚೌಡಾರೆಡ್ಡಿ, ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗುವಷ್ಟರಲ್ಲಿ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಇತ್ತ ಬಿಜೆಪಿ ಅಭ್ಯರ್ಥಿ ಚಿದಾನಂದ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಮಧ್ಯರಾತ್ರಿ ಮುಗಿದ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಂಡಾಯ ಅಭ್ಯರ್ಥಿ ಹಾಗೂ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ 7,798 ಮೊದಲ ಪ್ರಾಶಸ್ತ್ಯ ಮತಗಳನ್ನು ಗಳಿಸಿ ಮುನ್ನಡೆ ಸಾಧಿಸಿದರು.

ಇತ್ತ ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ 7,202 ಮೊದಲ ಪ್ರಾಶಸ್ತ್ಯದ ಮತಗಳಿಸಿ ಎರಡನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಚೌಡಾರೆಡ್ಡಿ ತೂಪಲ್ಲಿ 5,374 ಮೊದಲ ಪ್ರಾಶಸ್ತ್ಯದ ಮತಗಳೊಂದಿಗೆ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು 2949 ಮೊದಲ ಪ್ರಾಶಸ್ತ್ಯದ ಮತ ಗಳಿಸಿದ್ದಾರೆ. ಸದ್ಯ ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಜೆಡಿಎಸ್, ಪಕ್ಷೇತರ ಹಾಗೂ ಬಿಜೆಪಿ ಅಭ್ಯರ್ಥಿ ಮಧ್ಯೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಮತಗಳಿಕೆಯಲ್ಲಿ ಹಾವು ಏಣಿ ಆಟ ಶುರುವಾಗಿದೆ. ಮೊದಲ ಪ್ರಾಶಸ್ತ್ಯ ಮತಗಳಲ್ಲಿ ಫಲಿತಾಂಶ ಬರುವುದು ಅಸಾಧ್ಯವಾಗಿದ್ದು, ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಅನಿವಾರ್ಯವಾಗಲಿದೆ.

Last Updated : Nov 11, 2020, 6:21 AM IST

ABOUT THE AUTHOR

...view details