ಕರ್ನಾಟಕ

karnataka

By

Published : Jun 4, 2020, 8:43 PM IST

ETV Bharat / state

ರಾಜ್ಯಕ್ಕೆ ಮುಂಗಾರು ಪ್ರವೇಶ: ಕರಾವಳಿ-ಮಲೆನಾಡು ಭಾಗದಲ್ಲಿ ಮಳೆ

ಕರಾವಳಿ ಪ್ರವೇಶಿಸಿರುವ ಮುಂಗಾರು ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಲಿದೆ. ನೈರುತ್ಯ ಮಾರುತಗಳು ತೇವಾಂಶ ಹೊತ್ತು ತಂದು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದರು.

ಮಳೆ ಆರಂಭ
ಮಳೆ ಆರಂಭ

ಬೆಂಗಳೂರು: ನೈರುತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಕರಾವಳಿ ಪ್ರವೇಶಿಸಿರುವ ಮುಂಗಾರು ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಲಿದೆ. ನೈರುತ್ಯ ಮಾರುತಗಳು ತೇವಾಂಶ ಹೊತ್ತು ತಂದು ಮಳೆಯಾಗಲಿದೆ ಎಂದು ತಿಳಿಸಿದರು.

ಈಟಿವಿ ಭಾರತದ ಜೊತೆ ಮಾತನಾಡಿದ ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್.ಪಾಟೀಲ್
ನೈರುತ್ಯ ಮುಂಗಾರು ಪ್ರವೇಶ ಕುರಿತಾದ ಹವಾಮಾನದ ನಕ್ಷೆ

ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಒಳನಾಡಿನ ಎಲ್ಲಾ ಪ್ರದೇಶಗಳಲ್ಲೂ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಅಲ್ಲಲ್ಲಿ ಮಳೆಯಾಗಿದೆ ಎಂದು ತಿಳಿಸಿದರು.

ABOUT THE AUTHOR

...view details