ಬೆಂಗಳೂರು : ತಮ್ಮ ಕಚೇರಿಗೆ ಆಗಮಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರು, ವಿಧಾನಸಭೆ ಕಾರ್ಯದರ್ಶಿ ಅವರ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ವಿಧಾನಸೌಧದ ಕಚೇರಿಗೆ ಆಗಮಿಸಿದ ಸ್ಪೀಕರ್... ಅತೃಪ್ತ ಶಾಸಕರ ಆಗಮನ ನಿರೀಕ್ಷೆ - notice
ಶಾಸಕರಿಗೆ ಸ್ಪೀಕರ್ ಕಚೇರಿಯಿಂದ ಈಗಾಗಲೇ ನೋಟಿಸ್ ನೀಡಿದ್ದರೂ, ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ಶಾಸಕರು ಇಂದು ವಿಚಾರಣೆಗೆ ಬರಬಹುದೆಂಬ ನಿರೀಕ್ಷೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಇದ್ದಾರೆ. ಸ್ಪೀಕರ್ ಅವರ ಮುಂದಿನ ನಡೆ ಏನೆಂಬುದು ಕುತೂಹಲ ಮೂಡಿಸಿದೆ.
ರಾಜೀನಾಮೆ ನೀಡಿರುವ ಶಾಸಕರು ವಿಚಾರಣೆಗೆ ಆಗಮಿಸಬೇಕಿತ್ತು. ಆದರೆ ಸ್ಪೀಕರ್ ಕಚೇರಿಯಿಂದ ಈಗಾಗಲೇ ನೋಟಿಸ್ ನೀಡಿದ್ದರೂ, ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ಶಾಸಕರು ಇಂದು ವಿಚಾರಣೆಗೆ ಬರಬಹುದೆಂಬ ನಿರೀಕ್ಷೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಇದ್ದಾರೆ.
ಒಂದು ವೇಳೆ ಶಾಸಕರು ಹಾಜರಾಗದಿದ್ದರೆ ಮುಂದಿನ ಕ್ರಮದ ಕುರಿತು ಸ್ಪೀಕರ್ ಸಮಾಲೋಚನೆ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡು ಪತನವಾಗಿದೆ. ಎರಡು ದಿನಗಳಿಂದಲೂ ಒಂದು ರೀತಿಯ ಗೊಂದಲ ನಿರ್ಮಾಣವಾಗಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಶಾಸಕರ ಮೇಲೆ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಅವರಿಗೆ ದೂರು ನೀಡಿದ್ದಾರೆ.