ಕರ್ನಾಟಕ

karnataka

ETV Bharat / state

ಬೆಂಗಳೂರು ಹೊರತು ಬೇರೆ ಜಿಲ್ಲೆಗಳಲ್ಲಿ ಸಿಸಿಟಿವಿ ಅಳವಡಿಕೆ ಸಾಧ್ಯವಿಲ್ಲ ಎಂದ ಜ್ಞಾನೇಂದ್ರ: ಸರ್ಕಾರಕ್ಕೆ ಕುಟುಕಿದ ಸ್ಪೀಕರ್ ಕಾಗೇರಿ - Criminal activities in Kodagu district

ಬೆಂಗಳೂರು ನಗರದಲ್ಲಿ ಮಾತ್ರ ಸರ್ಕಾರದ ವತಿಯಿಂದ ಸಿಸಿಟಿವಿ ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ. ಆದರೆ, ಬೇರೆ ಜಿಲ್ಲೆಗಳಲ್ಲಿ ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

speaker-kageri-stung-the-government-over-cctv-installation
ಬೆಂಗಳೂರು ಹೊರತು ಬೇರೆ ಜಿಲ್ಲೆಗಳಲ್ಲಿ ಸಿಸಿಟಿವಿ ಅಳವಡಿಕೆ ಸಾಧ್ಯವಿಲ್ಲ ಎಂದ ಜ್ಞಾನೇಂದ್ರ: ಸರ್ಕಾರಕ್ಕೆ ಕುಟುಕಿದ ಸ್ಪೀಕರ್ ಕಾಗೇರಿ

By

Published : Sep 13, 2022, 4:15 PM IST

Updated : Sep 13, 2022, 5:17 PM IST

ಬೆಂಗಳೂರು: ಅಲ್ಲ ರೀ ಅಪ್ಪಚ್ಚು ರಂಜನ್ ಅವರೇ, ನೀವು ಪದೇ ಪದೆ ಕೇಳಿದರೆ ಶಾಸಕರ ನಿಧಿಯಿಂದಲೇ ದುಡ್ಡು ಕೊಡಿ ಎಂದು ಹೇಳುತ್ತಾರೆ. ಹೆಚ್ಚು ಒತ್ತಾಯ ಮಾಡಬೇಡಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪರೋಕ್ಷವಾಗಿ ಸರ್ಕಾರಕ್ಕೆ ಕುಟುಕಿದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು.

ಕೊಡಗು ಜಿಲ್ಲೆಯಲ್ಲಿ ಕೇವಲ 22 ಕಡೆ ಮಾತ್ರ ಸಿಸಿಟಿವಿ ಅಳವಡಿಸಲಾಗಿದೆ. ಗಡಿ ಜಿಲ್ಲೆಯಾಗಿರುವುದರಿಂದ ಇಲ್ಲಿ ಹೆಚ್ಚು ಸಿಸಿಟಿವಿ ಅಳವಡಿಸಬೇಕು ಎಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಅಪ್ಪಚ್ಚು ರಂಜನ್ ಒತ್ತಾಯಿಸಿದರು. ಈ ವೇಳೆ ಉತ್ತರ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಬೆಂಗಳೂರು ನಗರದಲ್ಲಿ ಮಾತ್ರ ಸರ್ಕಾರದ ವತಿಯಿಂದ ಸಿಸಿಟಿವಿ ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ. ಆದರೆ, ಬೇರೆ ಜಿಲ್ಲೆಗಳಲ್ಲಿ ಸಾಧ್ಯವಿಲ್ಲ. ತುರ್ತು ಸಂದರ್ಭದಲ್ಲಿ ಖಾಸಗಿಯವರ ದೃಶ್ಯಾವಳಿ ಪಡೆದು ಪರಿಶೀಲನೆ ನಡೆಸುತ್ತೇವೆ ಎಂದರು.

ಬೆಂಗಳೂರು ಹೊರತು ಬೇರೆ ಜಿಲ್ಲೆಗಳಲ್ಲಿ ಸಿಸಿಟಿವಿ ಅಳವಡಿಕೆ ಸಾಧ್ಯವಿಲ್ಲ ಎಂದ ಜ್ಞಾನೇಂದ್ರ:

ಇದಕ್ಕೆ ಅಪ್ಪಚ್ಚು ರಂಜನ್ ಆಕ್ಷೇಪ ವ್ಯಕ್ತಪಡಿಸಿದಾಗ, ಸ್ಪೀಕರ್ ಕಾಗೇರಿ ಅಸಹನೆ ವ್ಯಕ್ತಪಡಿಸಿದರು. ಇತರ ಜಿಲ್ಲೆಗಳಲ್ಲೂ ಸರ್ಕಾರದ ವತಿಯಿಂದ ಸಿಸಿಟಿವಿ ಅಳವಡಿಸಬೇಕು ಎಂದು ಪರೋಕ್ಷವಾಗಿ ಆಗ್ರಹಿಸಿದರು.

ಅಪರಾಧ ಚಟುವಟಿಕೆಗಳಿಗೆ ಕಡಿವಾಣ:ಇದೇ ವೇಳೆ, ಕೇರಳ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯ ಗಮನ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಅಪರಾಧಿಗಳ ಮೇಲೆ ಕಣ್ಗಾವಲು ಇಡಲು, ಸೂಕ್ಷ್ಮ ಪ್ರದೇಶಗಳಲ್ಲಿ, ಸಿಸಿ ಕ್ಯಾಮರಾ ಗಳನ್ನು ಅಳವಡಿಸುವ ಬಗ್ಗೆ ಪರೀಶಿಸಲಾಗುವುದು. ಕೊಡಗು ಜಿಲ್ಲೆಯಲ್ಲಿ 2021ರಲ್ಲಿ ಒಟ್ಟು 1,684 ಅಪರಾಧ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 1617 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2022ರ ಆಗಸ್ಟ್ ತಿಂಗಳ ಅಂತ್ಯದ ವರೆಗೆ ಒಟ್ಟು 1,122 ಪ್ರಕರಣಗಳು ವರದಿಯಾಗಿದ್ದು, 870 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸದನಕ್ಕೆ ತಿಳಿಸಿದರು.

ಇದನ್ನೂ ಓದಿ:ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವು, ರಾಜಕಾಲುವೆ ಸಮಗ್ರ ಅಭಿವೃದ್ಧಿಗೆ ಒತ್ತು: ಸಿಎಂ ಬಸವರಾಜ ಬೊಮ್ಮಾಯಿ

Last Updated : Sep 13, 2022, 5:17 PM IST

ABOUT THE AUTHOR

...view details