ಬೆಂಗಳೂರು :ಮುಂಬೈಗೆ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ನೋಟಿಸ್ ನೀಡಿದ್ದಾರೆ.
12 ಮಂದಿ ಅತೃಪ್ತ ಶಾಸಕರಿಗೆ ಪಕ್ಷಾಂತರ ನಿಷೇಧ ದೂರಿನ ಅರ್ಜಿ ಹಿನ್ನೆಲೆಯಲ್ಲಿ ನಿಮ್ಮನ್ನು ಯಾಕೆ ಅನರ್ಹಗೊಳಿಸಬಾರದು ಎಂದು ಪ್ರಶ್ನೆ ಕೇಳಿ ನೋಟಿಸ್ ನೀಡಿರುವ ಸ್ಪೀಕರ್, ನಾಳೆ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ಸೂಚಿಸಿದ್ದಾರೆ.
ಅತೃಪ್ತ ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್ ಅತೃಪ್ತ ಶಾಸಕರು ರಾಜ್ಯ, ತಮ್ಮ ಕ್ಷೇತ್ರವನ್ನು ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈಗೆ ಸೇರಿದ್ದಾರೆ. ಆದರೆ ಇದುವರೆಗೂ ಯಾವೊಬ್ಬ ಶಾಸಕರು ರಾಜ್ಯಕ್ಕೆ ವಾಪಸ್ ಬಂದಿಲ್ಲ. ಈ ಕುರಿತು ಸ್ಪೀಕರ್ ವಿವರಣೆ ನೀಡುವಂತೆ ಸೂಚಿಸಿದ್ದರೂ ಈ ಶಾಸಕರು ವಿಚಾರಣೆಗೆ ಹಾಜರಾಗುವುದು ಅನುಮಾನ ಎನ್ನಲಾಗಿದೆ. ಒಂದು ವೇಳೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಗೊಳಿಸಿದರೂ ರೆಬಲ್ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗಲಿದ್ದಾರೆ.
ಅತೃಪ್ತ ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್ ಈ ಮೊದಲು ಸಲ್ಲಿಸಿದ್ದ ಅರ್ಜಿಯಲ್ಲಿ ರಾಜೀನಾಮೆ ಸಲ್ಲಿಸಿದ ಬಳಿಕ ಈ ಅನರ್ಹತೆ ದೂರು ದಾಖಲಾಗಿದೆ. ನಮ್ಮನ್ನು ಹೆದರಿಸುವ ಉದ್ದೇಶದಿಂದಲೇ ಈ ದೂರು ನೀಡಲಾಗಿದೆ. ರಾಜೀನಾಮೆ ನೀಡಿದ ಬಳಿಕ ಅನರ್ಹತೆ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ತಿಳಿಸಿದ್ದರು.