ಬೆಂಗಳೂರು:ಬಿಜೆಪಿ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ನಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸೇರಿಸಿ ಒಟ್ಟು 9,456 ಕೋಟಿ ರೂ ಮೀಸಲಿಟ್ಟಿದ್ದಾರೆ. ಕೊಯ್ಲೋತ್ತರ ತಂತ್ರಜ್ಞಾನಕ್ಕೆ ಒತ್ತುಕೊಟ್ಟು ತೋಟಗಾರಿಕಾ ಬೆಳೆ ಮೌಲ್ಯವರ್ಧನೆ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತು ಮತ್ತು ಸಂಸ್ಕರಣೆಯ ಉತ್ತೇಜನಕ್ಕೆ ರೈತ ಸಂಪದ ಯೋಜನೆ ಅಡಿ ಕೆಫೆಕ್ ಸಂಸ್ಥೆಯ ಮೂಲಕ 100 ಕೋಟಿ ರೂಗಳಲ್ಲಿ ಯೋಜನೆ ರೂಪಿಸಲು ನಿರ್ಧಾರ ಮಾಡಲಾಗಿದೆ ಎಂದು ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಜೊತೆಯಾಗಿ ಅನುದಾನ ಘೋಷಣೆ ಮಾಡಿದ್ದರೂ, ತೋಟಗಾರಿಕೆ ಇಲಾಖೆ ಬೆಳೆಗಳ ಉತ್ತೇಜನಕ್ಕೂ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಇದೇ ವರ್ಷ ರಾಜ್ಯದ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಎಲ್ಲಾ ಪಕ್ಷಗಳು ಸಿದ್ಧಗೊಳ್ಳುತ್ತಿವೆ. ಅದರಲ್ಲೂ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಮುಂದಿನ ವಿಧಾನಸಭೆಯಲ್ಲೂ ಬಿಜೆಪಿ ಅಧಿಕ ಸ್ಥಾನಗಳನ್ನು ಪಡೆಯಬೇಕು. ಅಧಿಕಾರ ಕೈತಪ್ಪಿ ಹೋಗಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಬಜೆಟ್ನಲ್ಲಿ ಪ್ರಾಮುಖ್ಯತೆಯನ್ನು ನೀಡುವ ಪ್ರಯತ್ನವನ್ನು ಮಾಡಿದೆ.
ಅಡಿಕೆ ಬೆಳೆಯ ರೋಗ ನಿರ್ವಹಣೆಗಾಗಿ ನೂತನ ತಂತ್ರಜ್ಞಾನ ಅಭಿವೃದ್ಧಿ ಮಾಡಲು 10 ಲಕ್ಷ ಕೋಟಿ ರೂ ಅನುದಾನ ಘೋಷಣೆ ಮಾಡಿದ್ದಾರೆ. ದ್ರಾಕ್ಷಿ ಬೆಳೆಗಾರರಿಗೆ 100 ಕೋಟಿ ರೂ. ನೆರವು ಯೋಜನೆ ಪ್ರಾರಂಭಿಸಲಾಗುವುದು. ದ್ರಾಕ್ಷಿ ಬೆಳಗಾರಿಗೆ ನೆರವಾಗಲು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ ಮುಖಾಂತರ 100 ಕೋಟಿ ರೂ. ಗಳ ವೆಚ್ಚದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಪ್ರಕಟಿಸಿದರು.