ಬೆಂಗಳೂರು:ವಿಧಾನಸಭೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ನಗರಾಬೀವೃದ್ಧಿಗಾಗಿ ಕೊಡುಗೆ ಘೋಷಣೆ ಮಾಡಿದ್ದಾರೆ. ನಗರಾಬೀವೃದ್ಧಿಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 17 ಸಾವಿರಕ್ಕೂ ಹೆಚ್ಚು ಕೋಟಿ ರೂಪಾಯಿಗಳನ್ನು ನೀಡಲಾಗಿದೆ.
ಬೆಂಗಳೂರು ನಗರ ಅಭಿವೃದ್ಧಿಗೆ ಒತ್ತು:ಬೆಂಗಳೂರು ನಗರದಲ್ಲಿ 1,450 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಮತ್ತು ಸಬ್ ಆಟೀರಿಯಲ್ ರಸ್ತೆ ನಿರ್ಮಾಣಕ್ಕೆ ಪ್ರಮುಖ ಆದ್ಯತೆ ನಿಡಲಾಗಿದೆ. ಬಿಬಿಎಂಪಿ ಸೇರ್ಪಡೆಯಾದ ಹೊರ ವಲಯದ 110 ಗ್ರಾಮಗಳ ರಸ್ತೆ ಪುರ್ನರ್ ನಿರ್ಮಾಣಕ್ಕೆ 300 ಕೋಟಿ ರೂ. ಅನುದಾನ ಕೊಡಲಾಗಿದೆ.
ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೂ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೆಟೆಡ್ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಸಬ್ ಅರ್ಬ್ನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ ರಸ್ತೆ ವರೆಗೂ ಮೇಲ್ಸೇತುವೆ ನಿರ್ಮಿಸುವ ಮೂಲಕ ನೇರ ಸಂಪರ್ಕ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಶ್ರೀ ಭುವನೇಶ್ವರಿ ಥೀಂ ಪಾರ್ಕ್:ಬೆಂಗಳೂರು ನಗರದಲ್ಲಿ 250 ಶಿ ಟಾಯ್ಲೆಟ್ ನಿರ್ಮಾಣಕ್ಕೆ 50 ಕೋಟಿ ನೀಡಲಾಗಿದೆ. ಫೀಡಿಂಗ್ ರೂಂ, ಮೊಬೈಲ್ ಚಾರ್ಜಿಂಗ್, ತುರ್ತು ಎಸ್ಒಸಿ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗಿದೆ. ಬೆಂಗಳೂರಿಗೆ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಆರಂಭಿಸಲಾಗುವುದು. 27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್, 50 ಡಯಾಲಿಸಿಸ್ ಹಾಸಿಗೆ, 300 ಹಾಸಿಗೆಗಳ ಆಸ್ಪತ್ರೆ ಒತ್ತು ನೀಡಲಾಗಿದೆ. ಬೆಂಗಳೂರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 180 ಕೋಟಿ ರೂ. ಅನುದಾನ ಕೊಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಪ್ರಮುಖ ಆದ್ಯತೆ ನೀಡಲಾಗಿದೆ. 200 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಕ್ರಮ:ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದಕ್ಕಾಗಿ ಹೆಚ್ಚು ಸಂಚಾರ ದಟ್ಟಣೆ ಇರುವ 75 ಜಂಕ್ಷನ್ಗಳಲ್ಲಿ 150 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಕೃತಕ ಬುದ್ಧಿಮತ್ತೆ ಬಳಸಿಕೊಂಡು ಸಂಚಾರ ಸಿಗ್ನಲ್ಗಳ ನಿರ್ವಹಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಭಾಷಣದಲ್ಲಿ ಘೋಷಿಸಿದ್ದಾರೆ.
ಇದನ್ನೂ ಓದಿ:ರೈತರಿಗೆ ಸಿಹಿಸುದ್ದಿ ನೀಡಿದ ಬೊಮ್ಮಾಯಿ: 3 ಲಕ್ಷದವರೆಗಿದ್ದ ಶೂನ್ಯ ಬಡ್ಡಿದರ ಸಾಲದ ಮೊತ್ತ 5 ಲಕ್ಷಕ್ಕೆ ಏರಿಕೆ