ಬೆಂಗಳೂರು:ಗಣೇಶ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರು ಹಾಗೂ ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ.
ಗಣೇಶ ಹಬ್ಬದ ಹಿನ್ನೆಲೆ: ಬೆಂಗಳೂರು-ಕಲಬುರಗಿ ಮಧ್ಯೆ ವಿಶೇಷ ರೈಲು
ದೇಶಾದಾದ್ಯಂತ ಗಣೇಶ ಹಬ್ಬದ ಆಚರಣೆಗೆ ದಿನಗಣನೆ ಆರಂಭವಾಗಿದ್ದು, ರಾಜ್ಯದಲ್ಲಿಯೂ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುವುದರಿಂದ ಪ್ರಯಾಣಿಕರ ಸಂಖ್ಯೆ ಅಧಿಕವಾಗಿರಲಿದ್ದು, ಈ ಹಿನ್ನಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರು ಹಾಗೂ ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ.
ಗಣೇಶ ಹಬ್ಬದ ಹಿನ್ನೆಲೆ: ಬೆಂಗಳೂರು-ಕಲಬುರಗಿ ಮಧ್ಯೆ ವಿಶೇಷ ರೈಲು
ಆಗಸ್ಟ್ 30ರ ಸಂಜೆ 5 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಟು ಮಾರನೇ ದಿನ ಮುಂಜಾನೆ 4.20ಕ್ಕೆ ತಲುಪಲಿದೆ. ಹಾಗೆಯೇ ಸೋಮವಾರ ರಾತ್ರಿ 8.30ಕ್ಕೆ ಕಲಬುರಗಿಯಿಂದ ಹೊರಟು ಮಂಗಳವಾರ ಬೆಳಗ್ಗೆ 7.20 ಗಂಟೆಗೆ ಬೆಂಗಳೂರಿಗೆ ಬರಲಿದೆ.
16 ಕೋಚ್ ಗಳಿರುವ ವಿಶೇಷ ರೈಲು ಬೆಂಗಳೂರಿನಿಂದ ಹಿಂದೂಪುರ, ಧರ್ಮಾವರಂ, ಅನಂತಪುರ, ಮಂತ್ರಾಲಯ, ರಾಯಚೂರು ಮಾರ್ಗವಾಗಿ ಕಲಬುರಗಿ ತಲುಪಲಿದೆ ಎಂದು ಪ್ರಕಟಣೆಯಲ್ಲಿ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.