ಕರ್ನಾಟಕ

karnataka

ETV Bharat / state

ಜನವರಿ 6 ರಿಂದ ಮೂರು ದಿನ ವಿಶೇಷ ಮತದಾರರ ನೋಂದಣಿ ಅಭಿಯಾನ - Election Commission of India

ಜನವರಿ 6, 7 ಮತ್ತು 8 ರಂದು “ವಿಶೇಷ ಮತದಾರರ ನೋಂದಣಿ ಅಭಿಯಾನ” (ಮಿಂಚಿನ ನೋಂದಣಿ) ಕಾರ್ಯಕ್ರಮವನ್ನು ಎಲ್ಲಾ ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.

special voter registration campaign
ವಿಶೇಷ ಮತದಾರರ ನೋಂದಣಿ ಅಭಿಯಾನ

By

Published : Jan 3, 2020, 8:23 PM IST

ಬೆಂಗಳೂರು :ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬ ಧ್ಯೇಯವಾಕ್ಯ ಅನ್ವಯ ಬಿಟ್ಟು ಹೋದ ಹಾಗೂ ಯುವ ಮತದಾರರ ನೋಂದಣಿ ಅಭಿಯಾನದಡಿ ಜನವರಿ 6, 7 ಮತ್ತು 8 ರಂದು “ವಿಶೇಷ ಮತದಾರರ ನೋಂದಣಿ ಅಭಿಯಾನ” (ಮಿಂಚಿನ ನೋಂದಣಿ) ಕಾರ್ಯಕ್ರಮವನ್ನು ಎಲ್ಲಾ ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2020 ಕಾರ್ಯಕ್ರಮ ಪ್ರಗತಿಯಲ್ಲಿದ್ದು, ಎಲ್ಲಾ ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳು ಜನವರಿ 6, 7 ಮತ್ತು 8 ರಂದು ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು 2020 ರ ಕರಡು ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸೇರ್ಪಡೆ ಹಾಗೂ ತೆಗೆದು ಹಾಕಲಾಗಿರುವ ಮತದಾರರ ವಿವರಗಳ ಪಟ್ಟಿಯೊಂದಿಗೆ ಆಯಾಯ ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಹಾಗೂ ತಿಳುವಳಿಕೆಗಾಗಿ ಪ್ರಕಟಿಸಲಾಗಿದ್ದು, ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಹೊಸ ಅರ್ಜಿಗಳ ನಮೂನೆ 6, 7, 8 ಮತ್ತು 8ಎ ಅರ್ಜಿಗಳ ನಮೂನೆಗಳನ್ನು ಬಿ.ಎಲ್.ಒ. ಗಳಿಂದ ಪಡೆದು ಭರ್ತಿಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. ಹೆಸರು, ವಯಸ್ಸು, ತಂದೆಯ ಹೆಸರು ಇತ್ಯಾದಿಗಳಿಗೆ ತಿದ್ದುಪಡಿ ಮಾಡುವ ಅವಕಾಶವಿರುತ್ತದೆ.

ಈ ವಿಶೇಷ ಅಭಿಯಾನದ ಬಗ್ಗೆ ಸಾರ್ವಜನಿಕರು ತಮ್ಮ ಸ್ನೇಹಿತರು, ನೆರೆಹೊರೆ ಹಾಗೂ ಇತರ ಜನರು ಭಾಗವಹಿಸುವಂತೆ ಪ್ರೇರೇಪಿಬೇಕೆಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಅದೇ ರೀತಿ ವಿಶೇಷ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮ ಬೆಂಗಳೂರಿನಲ್ಲೂ ನಡೆಯಲಿದ್ದು, ಬೆಂಗಳೂರು ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಜನವರಿ 6, 7 ಮತ್ತು 8 ರಂದು ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಬೆಂಗಳೂರು ಒನ್ ಹಾಗೂ ಸಿ.ಎಸ್.ಸಿ. ಕೇಂದ್ರಗಳಲ್ಲಿ “ವಿಶೇಷ ನೋಂದಣಿ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ABOUT THE AUTHOR

...view details