ಬೆಂಗಳೂರು: ಮಂಗಳೂರು ಗಲಾಟೆ ಪ್ರಕರಣವನ್ನು ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಂಗಳೂರು ಗೋಲಿಬಾರ್ ಪ್ರಕರಣ: ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ - ವಿಧಾನಸಭಾ ಕಲಾಪ
ಮಂಗಳೂರು ಗಲಾಟೆ ಪ್ರಕರಣವನ್ನು ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯವಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ನ್ಯಾಯಾಂಗದ ತನಿಖೆ ನಡೆಸಬೇಕು. ತಪ್ಪು ಮಾಡಿರುವ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕಾನೂನು ಇದೆಯೋ, ಇಲ್ಲವೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು ಪೊಲೀಸ್ ಆಯುಕ್ತರು ನಿಷೇಧಾಜ್ಞೆ ವಿಧಿಸಿದ್ದರು. ಗೋಲಿಬಾರ್ನಲ್ಲಿ ಇಬ್ಬರು ಮೃತಪಡಲು ಅವರೇ ಕಾರಣ ಎಂದು ಆರೋಪಿಸಿದರು. ಮಂಗಳೂರಿನ ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ಘೋಷಣೆ ಮಾಡಿದ್ದ ಪರಿಹಾರವನ್ನು ನಂತರ ತಡೆ ಹಿಡಿಯಲಾಗಿದೆ. ಶಾಸಕ ಸೋಮಶೇಖರ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.