ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಮೊಂಡುತನದಿಂದ ಬಾಬಾ ರಾಮ್ ಸಿಂಗ್ರನ್ನು ಕಳೆದುಕೊಂಡಿದ್ದೇವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ಬಿಜೆಪಿಯ ರೈತವಿರೋಧಿ ಮೊಂಡುತನದಿಂದ ಬಾಬಾರಾಮ್ ಸಿಂಗ್ ಅವರನ್ನು ಕಳೆದುಕೊಂಡಿದ್ದೇವೆ' - Farmers protest
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಲ್ಲಿ ಭಾಗವಹಿಸಿದ್ದ ಹರಿಯಾಣದ ಗುರುದ್ವಾರದ ಧರ್ಮಗುರು ಬಾಬಾ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರದ ಮೊಂಡುತನವೇ ಕಾರಣ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
SR Patil
ತಮ್ಮ ಹಕ್ಕುಗಳಿಗಾಗಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿರುವುದಕ್ಕೆ ತೀವ್ರ ಬೇಸರವಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಬಾಬಾ ರಾಮ್ ಸಿಂಗ್ ತಾವು ಬರೆದ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಅವರು ತಿಳಿಸಿದ್ದಾರೆ.
ಓದಿ: 'ಕೈ' ಬಿಟ್ಟು ತೆನೆ ಹೊರುತ್ತಾರಾ ಸಿ. ಎಂ. ಇಬ್ರಾಹಿಂ!?: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು?