ಕರ್ನಾಟಕ

karnataka

ETV Bharat / state

ಶಿವಮೊಗ್ಗ ಸ್ಫೋಟ ಪ್ರಕರಣ: ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿ ರೂಲಿಂಗ್

ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಶಿವಮೊಗ್ಗದಲ್ಲಿ ನಡೆದ ಕಲ್ಲುಕ್ವಾರಿ ಸ್ಫೋಟ ಪ್ರಕರಣದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಕೋರಿದರು.

By

Published : Jan 29, 2021, 1:46 PM IST

Karnatak legislative council
ವಿಧಾನ ಪರಿಷತ್

ಬೆಂಗಳೂರು:ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಶಿವಮೊಗ್ಗದಲ್ಲಿ ನಡೆದ ಕಲ್ಲುಕ್ವಾರಿ ಸ್ಫೋಟ ಪ್ರಕರಣದ ಕುರಿತು ಚರ್ಚೆಗೆ ಅನುಮತಿ ಕೋರಿದ ನಿಲುವಳಿ ಸೂಚನೆಯನ್ನು ಪ್ರಶ್ನೋತ್ತರ ಕಲಾಪದ ನಂತರ ಕೈಗೆತ್ತಿಕೊಳ್ಳುವುದಾಗಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರೂಲಿಂಗ್ ನೀಡಿದರು.

ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ನಿಯಮ 59ರ ಅಡಿ ನಿಲುವಳಿ ಸೂಚನೆ ಪ್ರಸ್ತಾಪ ಮಾಡಲು ಅವಕಾಶ ಕೋರಿದರು. ಹುಣಸೋಡು ಗ್ರಾಮದ ಘಟನೆ ಪ್ರಸ್ತಾಪ ಮಾಡಿದರು. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಮನೆಗಳಿಗೆ ಹಾನಿ ಸಂಭವಿಸಿದೆ. ಈ ದುರಂತ ಘಟನೆ ಹಾಗೂ ಅಕ್ರಮ ಗಣಿಗಾರಿಕೆ ಮಹತ್ವದ ವಿಷಯವಾಗಿದ್ದು, ಚರ್ಚೆಗೆ ಅವಕಾಶ ನೀಡುವಂತೆ ಕೋರಿದರು.

ಇದಕ್ಕೆ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದರು. ಪ್ರಶ್ನೋತ್ತರ ಆದ ಮೇಲೆ ಮಂಡಿಸಬೇಕು ಎಂದರು. ನಂತರ ಪ್ರಶ್ನೋತ್ತರ ಕಲಾಪದ ನಂತರ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿ ರೂಲಿಂಗ್ ನೀಡಿದರು.

ABOUT THE AUTHOR

...view details