ಬೆಂಗಳೂರು: 6ನೇ ವೇತನ ಆಯೋಗ ಜಾರಿ ಬಗ್ಗೆ ಲಿಖಿತ ರೂಪದ ಭರವಸೆ ನೀಡಿದ್ದ ಸರ್ಕಾರ ಇದೀಗ ಚುನಾವಣಾ ನೀತಿ ಸಂಹಿತೆ ನೆಪ ಹೇಳುತ್ತಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
ಸರ್ಕಾರ-ಸಾರಿಗೆ ನೌಕರರ ಜಗಳದಲ್ಲಿ ಜನಸಾಮಾನ್ಯರಿಗೆ ಸಂಕಷ್ಟ: ಎಸ್.ಆರ್.ಪಾಟೀಲ್ - ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್
6 ನೇ ವೇತನ ಆಯೋಗ ಜಾರಿ ಸಂಬಂಧ ಸಾರಿಗೆ ನೌಕರರು ಇಟ್ಟಿರುವ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದ್ದು, ಮಾತು ತಪ್ಪಿದ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ. ಸರ್ಕಾರ ಹಾಗೂ ಸಾರಿಗೆ ನೌಕರರ ಜಗಳದಲ್ಲಿ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ದೂರಿದ್ದಾರೆ.
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್
ಇದನ್ನೂ ಓದಿ:ಹೆಚ್ಚು ಹಣ ವಸೂಲಿ ಮಾಡಿದ್ರೆ ವಾಹನ ಸೀಜ್: ಸಬ್ ಇನ್ಸ್ಪೆಕ್ಟರ್ ಎಚ್ಚರಿಕೆ
ಸರ್ಕಾರ ಹಾಗೂ ಸಾರಿಗೆ ನೌಕರರ ಜಗಳದಲ್ಲಿ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಬೆಂಗಳೂರಿನಲ್ಲಿ ಪ್ರತಿನಿತ್ಯ 30 ಲಕ್ಷ ಪ್ರಯಾಣಿಕರು ಸಂಚರಿಸುತ್ತಿದ್ದು, ಸಾರಿಗೆ ಮುಷ್ಕರದಿಂದ ಸಮಸ್ಯೆಯಾಗಲಿದೆ. ಹೀಗಾಗಿ ಸರ್ಕಾರ ಸಾರಿಗೆ ನೌಕರರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.
TAGGED:
transport strike latest news